ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಯಿಂದ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ. ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಚಂದ್ರಮ್ಮ ಅವರು ಬೇಲೂರು ತಾಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿನ ಕರುಣ್ ಎಂಬುವವರ ಕಾಫಿ ತೋಟದ 12 ಮಂದಿ ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಡಾನೆ ದಾಳಿ ಮಾಡಿದ್ದು, ಚಂದ್ರಮ್ಮ ಅವರು ಮೃತಪಟ್ಟಿದ್ದಾರೆ. 11 ಮಂದಿ ಕಾರ್ಮಿಕರು ಸ್ಥಳದಿಂದ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.