ಹಾಸನ: ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಇಂದು ಮೈಸೂರಿನಲ್ಲಿ ಐಜಿಪಿಯವರನ್ನು ಭೇಟಿಯಾಗಿ ಹಾಸನ ಡಿವೈಎಸ್ಪಿಯಾಗಿ ವರ್ಗಾವಣೆಯಾಗಿದ್ದ ಕಾರಣ, ವರದಿ ಮಾಡಿಕೊಳ್ಳಲು ಜಿಲ್ಲಾ ಪೊಲೀಸ್ ಕಚೇರಿಗೆ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನ ತಾಲ್ಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿಯಲ್ಲಿ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು.
ಕಾರು ಅಪಘಾತದಲ್ಲಿ ಗಾಯಗೊಂಡಿದ್ದಂತ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವ ಸ್ಥಿತಿಯಲ್ಲೂ ಅವರು ಇರಲಿಲ್ಲ. ಇದರ ನಡುವೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದರು. ಕ್ಷಣ ಕ್ಷಣಕ್ಕೆ ಅವರ ಸ್ಥಿತಿ ಗಂಭೀರಗೊಂಡಿತ್ತು. ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಈ ಅಪಘಾತದಲ್ಲಿ ಕಾರು ಚಾಲಕ ಮಂಜೇಗೌಡ ಕೂಡ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ವಿಷಯ ತಿಳಿದು ಮೈಸೂರು ಐಜಿಪಿ ಹಾಸನಕ್ಕೆ ಆಗಮಿಸಿದ್ದಾರೆ. ಅಲ್ಲದೇ ಖಾಸಗಿ ಆಸ್ಪತ್ರೆಗೆ ಹಾಸನ ಎಸ್ಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ವೈದ್ಯರಿಂದ ಮಾಹಿತಿಯನ್ನು ಪಡೆದಿದ್ದಾರೆ.
BREAKING: ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ಆದೇಶ | School Holiday
ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ: ಡಿಸಿಎಂ ಡಿ.ಕೆ ಶಿವಕುಮಾರ್