ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು 2 ಕಾರುಗಳ ಮಧ್ಯ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ.
2 ಕಾರುಗಳ ಮಧ್ಯೆ ಡಿಕ್ಕಿ ಆಗಿ ಐವರಿಗೆ ಗಂಭೀರವಾಗಿ ಗಾಯಗಳಾಗಿವೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ರಸ್ತೆ ಬದಿಗೆ ಎರಡು ಕಾರುಗಳು ಉರುಳಿ ಬಿದ್ದಿವೆ. ಗಾಯಾಳುಗಳಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಆಲೂರು ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.