ಹಾಸನ: ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಮೊಸಳೆ ಹೊಸಳ್ಳಿಯಲ್ಲಿ ಘೋರ ದುರಂತವೇ ಸಂಭವಿಸಿತ್ತು. ಕ್ಯಾಂಟರ್ ಹರಿದು 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 9 ಮಂದಿ ಸಾವನ್ನಪ್ಪಿದ್ದರು. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದೀಗ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವಯ್ಯನ ಕೊಪ್ಪಲು ಗ್ರಾಮದ ಚಂದನ್ (26) ಸಾವನ್ನಪ್ಪಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
BIG NEWS: ರಾಜ್ಯದಲ್ಲೊಬ್ಬ ಭ್ರಷ್ಟ ಅಬಕಾರಿ ಉಪ ಆಯುಕ್ತ: ಸೂಕ್ತ ಕ್ರಮಕ್ಕೆ ರಾಜ್ಯಪಾಲರು, ಲೋಕಾಯುಕ್ತಕ್ಕೆ ದೂರು
ಹಾಸನ ಗಣೇಶ ಮೆರವಣಿಗೆ ದುರಂತ: ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಜೆಡಿಎಸ್