ಬೆಂಗಳೂರು: ಹಾಸನ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠವು ಮೇ.28ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.
ಮೇ.8ರಂದು ಹಾಸನದ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಹಾಸನ ಅಶ್ಲೀಲ ವೀಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿತು. ಆರೋಪಿಗಳಾದಂತ ನವೀನ್ ಗೌಡ, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್, ಕಾಂಗ್ರೆಸ್ ಮುಖಂಡ ಪುಟ್ಟರಾಜು ಹಾಗೂ ಚೇತನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.
ಈ ಹಿನ್ನಲೆಯಲ್ಲಿ ಇಂದು ಜಾಮೀನು ಕೋರಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ತಕರಾರು ಅರ್ಜಿ ಸಲ್ಲಿಸಲು ಪೊಲೀಸರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಮೇ.28ಕ್ಕೆ ಮುಂದೂಡಿಕೆ ಮಾಡಿದೆ.
ಅಂದಹಾಗೇ ಹಾಸನ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಎಸ್ಐಟಿ ಪೊಲೀಸರಿಂದ ಬಂಧನಕ್ಕೆ ಒಳಗಾಗೋ ಭೀತಿಯಲ್ಲಿರುವಂತ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹೀಗಿದ್ದೂ ಹೈಕೋರ್ಟ್ ಗೆ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅಕ್ಷರಶಃ ‘ರೌಡಿ ರಾಜ್ಯ’ವಾಗಿದೆ ಮಾರ್ಪಟ್ಟಿದೆ: ಆರ್.ಅಶೋಕ್ ಕಿಡಿ
ರಾಹುಲ್ ದ್ರಾವೀಡ್ ಬದಲಿಗೆ ʻಟೀಂ ಇಂಡಿಯಾʼದ ನೂತನ ಕೋಚ್ ಆಗಿ ʻಗೌತಮ್ ಗಂಭೀರ್ʼ ಆಸಕ್ತಿ : ವರದಿ