ಬೆಂಗಳೂರು: ರಾಜ್ಯದಲ್ಲೇ ತಲ್ಲಣ ಸೃಷ್ಠಿಸಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವಂತ ಹಾಸನ ಪೆನ್ ಡ್ರೈವ್ ವಿಚಾರವಾಗಿ, ರಾಜ್ಯ ಮಹಿಳಾ ಆಯೋಗವು ಸರ್ಕಾರಕ್ಕೆ ಕಾಮುಕನ ವಿಚಾರಣೆ ನಡೆಸೋದಕ್ಕೆ ಪೊಲೀಸ್ ತಂಡ ರಚಿಸುವಂತೆ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದು ಮನವಿ ಮಾಡಿದೆ.

ಹಾಸನದಲ್ಲಿ ನಡೆದಿರುವ ಭಯಾನಕ ಸೆಕ್ಸ್ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಹೆಣ್ಣುಮಕ್ಕಳ ಜೊತೆ ಲೈಂಗಿಕ ಚಟುವಟಿಕೆ ನಡೆಸುವುದರ ಜೊತೆಗೆ ಅದನ್ನು ಚಿತ್ರೀಕರಿಸಿಕೊಂಡ ವ್ಯಕ್ತಿ ಮತ್ತು ಈ ವಿಡಿಯೋಗಳನ್ನು ಸಾರ್ವಜನಿಕಗೊಳಿಸಿದ ವ್ಯಕ್ತಿಯನ್ನು ವಿಚಾರಣೆ ನಡೆಸುವ ಸಲುವಾಗಿ ವಿಶೇಷ ತಂಡವನ್ನು ರಚಿಸಬೇಕೆಂದು ಕೋರಿದೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ ಇಂದು ಪತ್ರ ಬರೆದಿದ್ದು, ಹಾಸನದಲ್ಲಿ ನಡೆಯುತ್ತಿರುವ ಆತಂಕಕಾರಿ ಘಟನೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆಯಲಾಗಿದೆ.

ಪ್ರಭಾವಿ ರಾಜಕಾರಣಿ ಅನೇಕ ಮಹಿಳೆಯರನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡಿರುವ ದೃಶ್ಯಗಳು ಇರುವ ಪೆನ್ ಡ್ರೈವ್ ಗಳು ಹಾಸನ ನಗರದ ಜನತೆಯ ಕೈಗೆ ಸಿಕ್ಕು ತಲೆ ತಗ್ಗಿಸುವಂಥ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ಮಹಿಳಾ ಆಯೋಗಕ್ಕೂ ಈಗಾಗಲೇ ಹಲವು ದೂರುಗಳು ಬಂದಿದ್ದು ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡವೊಂದನ್ನು ರಚಿಸಬೇಕು ಎಂದು ನಾಗಲಕ್ಷ್ಮಿ ಚೌದರಿ ಮನವಿ ಮಾಡಿದ್ದಾರೆ.

‘ತಪ್ಪು ತಿಳುವಳಿಕೆ’ : ಮಾನವ ಹಕ್ಕುಗಳ ಕುರಿತ ಅಮೆರಿಕದ ವರದಿಯನ್ನ ‘ತಾರತಮ್ಯ’ ಎಂದ ಭಾರತ

BREAKING: ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

Share.
Exit mobile version