ಬೆಂಗಳೂರು: ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಕಾರ್ತಿಕ್ ಗೌಡ ಎಂಬಾತನನ್ನು ಎಸ್ಐಟಿ ಬಂಧಿಸಿದೆ.
ಹಾಸನ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿತ್ತು. ಈ ಪ್ರಕರಣದಲ್ಲಿ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಬಂಧನಕ್ಕೊಳಾಗಿ ಎಸ್ಐಟಿ ಕಸ್ಟಡಿಯಲ್ಲಿದ್ದಾರೆ.
ಇದೀಗ ಬಂಧಿತ ಆರೋಪಿ ವಕೀಲ ದೇವರಾಜೇಗೌಡ ಅವರು ನೀಡಿದಂತ ಸುಳಿವಿನ ಮೇರೆಗೆ ಹಾಸನ ಪೆನ್ ಡ್ರೈವ್ ವೈರಲ್ ಪ್ರಕರಣದಲ್ಲಿ ಆರೋಪಿ ಕಾರ್ತಿಕ್ ಗೌಡ ಎಂಬಾತನನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.
ನಟ ಧ್ರುವ ಸರ್ಜಾ ಮಧ್ಯಸ್ಥಿಕೆ ವಹಿಸಿದ್ರೆ ಚಂದನ್ ಶೆಟ್ಟಿ-ನಿವೇದಿತಾ ಒಂದಾಗಬಹುದು: ಪ್ರಥಮ್