ಹಾಸನ : ತನ್ನ ಪ್ರೀತಿಯನ್ನು ನಿರಾಕರಿಸಿದಕ್ಕೆ ಕುಪಿತಗೊಂಡ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನು ಕತ್ತು ಸೀಳಿ ಹತ್ಯೆ ಮಾಡಿದ, ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಗ್ರಾಮೀಣಾಭಿವೃದ್ಧಿ 2,022 ಇಲಾಖೆಯಿಂದ ಹುದ್ದೆಗಳ ನೇಮಕಾತಿ!
ವಿದ್ಯಾರ್ಥಿನಿ ಶಾಲೆ ಮುಗಿಸಿ ಮನೆಗೆ ಹೋಗುವಾಗ ಅಡ್ಡಗಟ್ಟಿದ ಶರತ್ ಎಂಬ ಯುವಕ ಚಾಕುವಿನಿಂದ ಬಾಲಕಿಯ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ನಂತರ ಅಲ್ಲಿಂದ ಪರಾರಿಯಾದ ಆತ ಚಲಿಸುವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.
ಆಸ್ತಿ ಮಾಲೀಕರಿಗೆ ‘ತೆರಿಗೆ ಮೊದಲು, ಖಾತಾ ಆಮೇಲೆ’ ಆಯ್ಕೆ ನೀಡಲು ಬಿಬಿಎಂಪಿ ನಿರ್ಧಾರ
ಇದೀಗ ಕೊಲೆಗೆ ಇಡಾಗಿರುವ ಯುವತಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ರೈಲ್ವೆ ಪೊಲೀಸರು ಯುವಕನ ಮೃತದೇಹ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
‘ಭಾವನಾತ್ಮಕ’ ವಿಚಾರಗಳನ್ನು ಪ್ರಸ್ತಾಪಿಸಿ ‘ಬಿಜೆಪಿ’ ಮತ ಪಡೆಯಲು ಯತ್ನಿಸುತ್ತಿದೆ : ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿ