ಹಾಸನ : ದಕ್ಷಿಣ ಕರ್ನಾಟಕ ಭಾಗದಲ್ಲಿ ಆಗಾಗ ಮನುಷ್ಯರ ಮೇಲೆ ಕಾಡಾನೆ ದಾಳಿಗಳು ಸಂಭವಿಸುತ್ತದೆ ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೆಹಳ್ಳಿ ಹಾಗೂ ಹುಲಿಮಕ್ಕಿ ಎಂಬಲ್ಲಿ ಕಾಡಾನೆ ದಾಳಿ ಮಾಡಿದ್ದರಿಂದ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅರೆಹಳ್ಳಿ, ಹುಲಿಮಕ್ಕಿ ಗ್ರಾಮದಲ್ಲಿ ಕಾಫಿ ತೋಟದಲ್ಲಿದ್ದ ಕೂಲಿ ಕಾರ್ಮಿಕರ ಮೇಲೆ ಕಾಡಾನೆ ದಾಳಿ ಮಾಡಿದೆ.ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹರೇಹಳ್ಳಿ ಹಾಗೂ ಹುಲೇಮಕಿ ಎಂಬ ಗ್ರಾಮದಲ್ಲಿ ಕಾಡಾನೆ ದಾಳಿ ಮಾಡಿದೆ. ದಾಳಿಯಿಂದ ಮಹಿಳೆ ಸೇರಿ ಮೂವರಿಗೆ ಗಂಭೀರವಾದಂತಹ ಗಾಯಗಳಾಗಿವೆ ಎಂದು ಹೇಳಲಾಗುತ್ತಿದೆ.
ಎರಡು ಕಾಡಾನೆಗಳಿಂದ ಪುಂಡಾಟ ನಡೆದಿದ್ದು, ಹಮೀದ್ ಎಂಬುವರ ತೋಟದಲ್ಲಿ ಸುಮಾರು 15 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕಾಡಾನೆ ಕಾರ್ಮಿಕರ ಮೇಲೆ ದಾಳಿ ಮಾಡಿದೆ. ಮಹಿಳೆ ಸೇರಿ ಇಬ್ಬರನ್ನು ಕಾಡಾನೆ ಸೊಂಡಿಲಿನಿಂದ ಎತ್ತಿ ಬಿಸಾಡಿದೆ ಎಂದು ಹೇಳಲಾಗುತ್ತಿದ್ದು ಪಕ್ಕದ ಮಾದೇಗೌಡರ ಕಾಫಿ ತೋಟಕ್ಕೆ ನುಗ್ಗಿ ಅಲ್ಲಿಗೂ ಕೂಡ ಕಾರ್ಮಿಕರ ಮೇಲೆ ಈ ಒಂಟಿ ಸಲಗ ದಾಳಿ ಮಾಡಿದೆ.
ಗಣೇಶ ಎನ್ನುವವರನ್ನು ಕಾಲಿನಿಂದ ತುಳಿದಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಘಟನೆಯಲ್ಲಿ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಆಸ್ಪತ್ರೆಗೆ RFO ಶಿಲ್ಪಾ ಅವರು ಭೇಟಿ ನೀಡಿ ಗಾಯಳುಗಳ ಆರೋಗ್ಯ ವಿಚಾರಿಸಿದರು.