ಹಾಸನ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಚಿರತೆಯೊಂದು ದಾಳಿ ನಡೆಸಿದ್ದು, ಆದರೆ ಯುವಕ ಎದೆಗುಂದದೆ ಚಿರತೆಯೊಂದಿಗೆ ಹೋರಾಡಿ ತನ್ನ ಪ್ರಾಣವನ್ನು ಉಳಿಸಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗೋಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೌದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ದಾಳಿ ಮಾಡಿದ ಚಿರತೆಯೊಂದಿಗೆ ನವೀನ್ ಎಂಬ ಯುವಕನ ಮೇಲೆ ಏಕಾಏಕಿ ಆತನ ಮೇಲೆ ಚಿರತೆ ದಾಳಿ ಮಾಡಿದೆ. ಕೈಯಲ್ಲಿ ಕುಡುಗೋಲು ಹಿಡಿದಿದ್ದರಿಂದ ಚಿರತೆ ವಿರುದ್ಧ ಸೆಣೆಸಾಡಿದ್ದಾನೆ. ಬಳಿಕ ಕಿರುಚಾಡುತ್ತಿದ್ದಂತೆ ಅಕ್ಕಪಕ್ಕದ ಜನರು ಧಾವಿಸಿದ್ದಾರೆ. ಜನರನ್ನ ನೋಡಿದ ಚಿರತೆ ಕಾಡಿನೊಳಗೆ ಓಡಿ ಹೋಗಿದೆ.
ಗಾಯಗೊಂಡ ನವೀನ್ ಅನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ನವೀನ್ ದಾಖಲಾಗಿರುವ ಆಸ್ಪತ್ರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಗೋಪನಹಳ್ಳಿ ಕೆರಗೋಡು ಭಾಗದಲ್ಲಿ ಚಿರತೆಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೂಡಲೇ ಬೋನು ಇಟ್ಟು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.