ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇನ್ನೂ ಕಾನೂನು ಸಂಕಷ್ಟ ತಪ್ಪಿಲ್ಲ. ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವಂತ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ 153 ಸಾಕ್ಷಿಗಳೊಂದಿಗೆ 2,360 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮನೆಗೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 10 ಲಕ್ಷ ದಂಡವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ವಿಧಿಸಿ ಮಹತ್ವದ ತೀರ್ಪು ನೀಡಲಾಗಿತ್ತು.
ಈ ಬೆನ್ನಲ್ಲೇ ಪ್ರಜ್ವಲ್ ಮತ್ತು ರೇವಣ್ಣ ವಿರುದ್ಧದ ದಿನಾಂಕ 28-08-2024ರಂದು ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರದ ಸಂಬಂಧ ತನಿಖೆ ನಡೆಸಿರುವಂತ ಸಿಐಡಿ ಪೊಲೀಸರು 153 ಸಾಕ್ಷಿಗಳೊಂದಿಗೆ 2,360 ಪುಟಗಳ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.
ಇದಲ್ಲದೇ ಬೆಂಗಳೂರಿನ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದಂತ ದಿನಾಂಕ 10-06-2024ರ ಲೈಂಗಿಕ ದೌರ್ಜನ್ಯ ಕೇಸ್ ಸಂಬಂಧ 74 ಸಾಕ್ಷಿಗಳ ಜೊತೆಗೆ 681 ಪುಟಗಳ ಚಾರ್ಜ್ ಶೀಟ್ ಕೂಡ ಸಲ್ಲಿಕೆ ಮಾಡಲಾಗಿದೆ.
BREAKING: ಗ್ರಾನೈಟ್ ಕ್ವಾರಿಯಲ್ಲಿ ಕಲ್ಲು ಕುಸಿದುಬಿದ್ದು 3 ಕಾರ್ಮಿಕರು ದುರ್ಮರಣ