ನವದೆಹಲಿ : 2019ರ ದ್ವೇಷ ಭಾಷಣ ಪ್ರಕರಣದಲ್ಲಿ ಶಿಕ್ಷೆ ಪ್ರಶ್ನಿಸಿದ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಅವರಿಗೆ ವಿಶೇಷ ಸಂಸದ/ಶಾಸಕರ ನ್ಯಾಯಾಲಯ ಮಂಗಳವಾರ ನಿಯಮಿತ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ, ಅಜಮ್ ಖಾನ್ರನ್ನ ಉತ್ತರ ಪ್ರದೇಶ ವಿಧಾನಸಭೆಯಿಂದ ಅನರ್ಹಗೊಳಿಸಲಾಯಿತು.