ಚಾಮರಾಜನಗರ : ಮದುವೆಗೆ ಹೆಣ್ಣು ಸಿಗುತ್ತಿಲ್ಲ ದಯವಿಟ್ಟು ಕರುಣೆ ತೋರಿಸಿ ವಧುವನ್ನ ಹುಡುಕಿ ಕೊಡು ಎಂದು ಮಲೆ ಮಹದೇಶ್ವರನನ್ನು ಮನಸಲ್ಲಿ ಪ್ರಾರ್ಥಿಸಿ ಯುವಕರ ದಂಡೊಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಬರಿಗಾಲಲ್ಲಿ ಪಾದಯಾತ್ರೆ ಆರಂಭಿಸಿದ್ದಾರೆ.
ಹೌದು ಇಂತಹ ಒಂದು ಅಚ್ಚರಿ ಮೂಡಿಸುವಂತಹ ಸಂಪ್ರದಾಯ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿ ದೀಪಾವಳಿಯಂದು ಈ ಒಂದು ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಈ ರೀತಿ ಒಂದು ಸಂಪ್ರದಾಯವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಈ ಬಾರಿಯೂ ಕೂಡ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಯುವಕರ ದಂಡೇ ಬೆಟ್ಟಕ್ಕೆ ಹರಿದು ಬರುತ್ತಿದೆ. ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಕೊಳ್ಳೇಗಾಲ ತಾಲೂಕಿನ ಹೊಸಮಾಲಂಗಿ ಗ್ರಾಮದ ಯುವಕರು ವಧು ಸಿಗಲೆಂದು ಇಷ್ಟಾರ್ಥ ಇಟ್ಟುಕೊಂಡು ಬರಿಗಾಲು ಪಾದಯಾತ್ರೆ ನಡೆಸಿದ್ದಾರೆ.
ಹೊಸಮಾಲಂಗಿಯಲ್ಲಿ 62 ಮಂದಿ ಯುವಕರಿಗೆ ಮದುವೆಯಾಗಿಲ್ಲ, ಎಷ್ಟು ಹುಡುಕಿದರೂ ವಧು ಸಿಗುತ್ತಿಲ್ಲ. ಮಾದಪ್ಪ ಕರುಣೆ ತೋರಿಸಿ ನಮಗೆ ಮದುವೆ ಮಾಡಿಸು ಎಂದು ಬೇಡಿ ಯಾತ್ರೆ ಹೊರಟ್ಟಿದ್ದೇವೆ ಎಂದು ಪಾದಯಾತ್ರೆ ಹೋರಾಟವರಲ್ಲಿ ಯುವಕನೊಬ್ಬ ತಿಳಿಸಿದ್ದಾನೆ. ಕೇವಲ ರಾಜ್ಯ ಆಸ್ಟ್ರೇಲಿಯಾದೆ ಅಕ್ಕಪಕ್ಕದ ರಾಜ್ಯಗಳಿಂದ ಕೂಡ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು ಅವರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ.