ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ರಿಂದ 74.99 ಹಾಗೂ ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು WWW.SW.KAR.NIC.IN ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ : ಈ ಯೋಜನೆಯಡಿ ಪ್ರತಿ ವರ್ಷ ಸಿಗಲಿದೆ 72,000 ರೂ. ಪಿಂಚಣಿ!