ಬೆಂಗಳೂರು : ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣಡ ಮಾಡಿದ್ದಾರೆ.
ಶುಕ್ರವಾರ ಮುಂಜಾನೆ ಭೀಕರ ಅಪಘಾತ ನಡೆದು 13 ಮಂದಿ ಸಾವನ್ನಪ್ಪಿದ್ದರೂ ಜಿಲ್ಲಾಸ್ಪತ್ರೆಗೆ ಯಾರೂ ಜನಪ್ರತಿನಿಧಿಗಳು ಬಾರದ ಹಿನ್ನೆಲೆಯಲ್ಲಿ ಸಂಬಂಧಿಕರು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಸರ್ಕಾರದಿಂದ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಪರಿಹಾರ ನೀಡದಿದ್ದರೆ ಶವಾಗಾರದಿಂದ ಶವ ತೆಗೆದುಕೊಂಡು ಹೋಗಲ್ಲ ಎಂದು ಕಿಡಿಕಾರಿ, ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಮೊದಲಿಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪವನ್ನಷ್ಟೇ ತಿಳಿಸಿದ್ದರು. ಬಳಿಕ ಪರಿಹಾರ ಘೋಷಣೆ ಮಾಡಿದ್ದಾರೆ.
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದರು.
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.
– ಮುಖ್ಯಮಂತ್ರಿ @siddaramaiah#ಹಾವೇರಿಅಪಘಾತ— CM of Karnataka (@CMofKarnataka) June 28, 2024