ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮತ್ತು ಕಂಪ್ಯೂಟರ್ ಟ್ಯಾಲಿ, ಅಕೌಂಟಿಂಗ್ ತರಬೇತಿಗೆ ಜಿಲ್ಲೆಯ ನಿರುದ್ಯೋಗಿ ಯುವಕ ಮತ್ತು ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಬಿಪಿಎಲ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ತರಬೇಕು. ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ, ನಿರ್ದೇಶಕರು, ವಿಜಯ ಬ್ಯಾಂಕ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ, ಹಾವೇರಿ ಮೊ.9110865650 ಸಂಪರ್ಕಿಸಲು ಕೋರಲಾಗಿದೆ.