ಹಾವೇರಿ : ಕರ್ತವ್ಯ ಲೋಪ ಹಿನ್ನಲೆ ಹಾವೇರಿ ಜಿಲ್ಲೆಯ ಗುತ್ತಲ ಠಾಣೆ ಪಿಎಸ್ಐ ಬಸನಗೌಡ ಬಿರಾದರ ಅಮಾನತುಗೊಳಿಸಿ ದಾವಣಗೆರೆ ಪೂರ್ವ ವಲಯ ಐಜಿಪಿ ಡಾ. ರವಿಕಾಂತ್ ಗೌಡ ಆದೇಶ ಹೊರಡಿಸಿದ್ದಾರೆ.
ಗುತ್ತಲ ಪಟ್ಟಣದಲ್ಲಿ ಮಟ್ಕಾ ರಾಜಾರೋಷವಾಗಿ ನಡೆಯುತ್ತಿತ್ತು. ಮೂರು ದಿನಗಳ ಹಿಂದೆ ಗುತ್ತಲ ಪಟ್ಟಣಕ್ಕೆ ರುದ್ರಪ್ಪ ಲವಾಣಿ ಭೇಟಿ ನೀಡಿದ್ದರು. ವಿವಿಧ ಕಾಮಗಾರಿಗಳ ಉದ್ಘಾಟನೆಗೆ ರುದ್ರಪ್ಪ ಲಮಾಣಿ ಆಗಮಿಸಿದ್ದರು. ಆರೋಪಿಯನ್ನು ಹಿಡಿದು ಪೊಲೀಸರಿಗೆ ರುದ್ರಪ ಲಮಾಣಿ ಒಪ್ಪಿಸಿದ್ದಾರೆ. ಮಟ್ಕಾ ದಂದೇ ಕೋರರನ್ನು ಹಿಡಿಯಲು ಶಾಸಕರೇ ಬರಬೇಕಾಯಿತು ಎಂದು ಪೊಲೀಸರ ವಿರುದ್ಧ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.








