ಹಾವೇರಿ: ಜಿಲ್ಲೆಯಲ್ಲಿ ಘೋಷೀತವಾಗಿರುವ ದಿನಾಂಕದಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯೋದು ಅನುಮಾನ ವ್ಯಕ್ತವಾಗಿದೆ.
BREAKING NEWS: PSI ನೇಮಕಾತಿ ಹಗರಣ ಸಿಬಿಐಗೆ ವಹಿಸಿ; ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ
ಸಮ್ಮೇಳನದ ವಿಚಾರದಲ್ಲಿ ಸರಕಾರ ಮತ್ತು ಜಿಲ್ಲಾಡಳಿತದ ನಡೆಯ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಾಹಿತ್ಯ ಸಮ್ಮೇಳನ ನವಂಬರ್ 11,12 ಮತ್ತು 13ರಂದು ನಡೆಯುವುದು ಅನುಮಾನ ವ್ಯಕ್ತವಾಗಿದೆ.
BREAKING NEWS: PSI ನೇಮಕಾತಿ ಹಗರಣ ಸಿಬಿಐಗೆ ವಹಿಸಿ; ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ, ಸಮ್ಮೇಳನ ಪ್ರಾರಂಭವಾಗಲು ಇನ್ನೂ ಒಂದು ತಿಂಗಳು ಏಳು ದಿನಗಳು ಮಾತ್ರ ಬಾಕಿ ಇದೆ. ಸಮ್ಮೇಳನದ ಪೂರ್ವದಲ್ಲಿ ಸಮ್ಮೇಳನದ ಲಾಂಛನ ಬಿಡುಗಡೆ ಆಗಬೇಕು, ಸ್ವಾಗತ ಸಮಿತಿ ಸೇರಿದಂತೆ ಇಪ್ಪತ್ತು ಸಮಿತಿಗಳು ರಚನೆ ಆಗಬೇಕು. ವಸತಿ ವ್ಯವಸ್ಥೆ, ಪ್ರತಿನಿಧಿಗಳ ನೋಂದಣಿ ಆಗಬೇಕು. ಈವರೆಗೆ ಯಾವುದೇ ಕೆಲಸವೂ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸ್ವಾಯತ್ತ, ಸ್ವಾಭಿಮಾನದ ಸಂಸ್ಥೆ. ಮುಖ್ಯಮಂತ್ರಿ ಅವರ ಮನೆ ಕಾಯುವ ಅಧ್ಯಕ್ಷ ನಾನಾಗೋದಿಲ್ಲ ಎಂದಿದ್ದಾರೆ.