ಹಾವೇರಿ : ಹಾವೇರಿ ನಗರದಲ್ಲಿ ಇಂದಿನಿಂದ ಮೂರು ದಿನ ಅದ್ದೂರಿಯಾಗಿ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ.
ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಬೆಳಗ್ಗೆ 10:30 ಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ನಂತರ ಅಧ್ಯಕ್ಷ ಭಾಷಣ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಿಎಂ ಬೊಮ್ಮಾಯಿ ಸೇರಿ ಅತಿಥಿಗಳಿಗೆ ಭಾಷಣ ಮಾಡಲು ಕನ್ನಡ ಸಾಹಿತ್ಯ ಪರಿಷತ್ ಸಮಯ ನಿಗದಿಗೊಳಿಸಿದೆ. ಸಿಎಂ ಬೊಮ್ಮಾಯಿ ಸೇರಿ ಎಲ್ಲಾ ಅತಿಥಿಗಳಿಗೂ ಈ ನಿಯಮ ಅನ್ವಯವಾಗಲಿದೆ. ಉದ್ಘಾಟನಾ ಭಾಷಣ ಮಾಡಲು ಮುಖ್ಯಮಂತ್ರಿಗಳಿಗೆ 30 ನಿಮಿಷ ಸಮಯ ನಿಗದಿ, ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಅವರ ಭಾಷಣಕ್ಕೆ 45 ನಿಮಿಷ ನಿಗದಿ, ಬಿಎಸ್ವೈ, ಹೆಚ್ಡಿಕೆ ಸೇರಿ ಗಣ್ಯರಿಗೆ 10 ನಿಮಿಷ ಸಮಯ ನಿಗದಿ ಮಾಡಲಾಗಿದೆ. ಈ ಸಮಯದೊಳಗೆ ಭಾಷಣ ಮಾಡಿ ಮುಗಿಸಬೇಕೆಂಬ ನಿಯಮವನ್ನು ಕನ್ನಡ ಸಾಹಿತ್ಯ ಪರಿಷತ್ ತಂದಿದೆ.
ಹೌದು. ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈಗಾಗಲೇ ಭರ್ಜರಿ ಸಿದ್ದತೆ ನಡೆಸಲಾಗಿದೆ.86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 6,7 ಮತ್ತು 8 ರಂದು ಹಾವೇರಿ ನಗರದ ಶ್ರೀ ಅಜ್ಜಯ್ಯನ ದೇವಸ್ಥಾನದ ಎದುರು ಕನಕ-ಶರೀಫ ಮತ್ತು ಸರ್ವಜ್ಞ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆಯಲ್ಲಿ ಜರುಗಲಿದೆ.
ಹಾವೇರಿಯ ಹೊರವಲಯದ ಅಜ್ಜಯ್ಯ ಗುಡಿಯ ಹತ್ತಿರ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಜರ್ಮನ್ ತಂತ್ರಜ್ಞಾನವನ್ನ ಬಳಿಸಿ ಪ್ರಧಾನ ವೇದಿಕೆ ಹಾಗೂ ಪುಸ್ತಕ ಮಳಿಗೆ, ವಸ್ತು ಪ್ರದರ್ಶನ ಮಾಡಲಾಗಿದೆ. ಸಮ್ಮೆಳನಕ್ಕೆ ಬರುವ ಲಕ್ಷಾಂತರ ಜನರಿಗೆ ಊಟ ಹಾಗೂ 70 ಸಾವಿರ ಜನರಿಗೆ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನಕ್ಕೆ ಬರುವ ಪ್ರತಿಯೊಬ್ಬ ಬಗೆ ಬಗೆಯಾದ ಊಟ ಸಿದ್ದವಾಗಲಿದೆ. ಬೆಳಗ್ಗೆ ತಿಂಡಿಗೆ ಉಪ್ಪಿಟ್ಟು, ಬೆಲ್ಲದ ಟೀ, , ಬೆಲ್ಲದ ಟೀ ನೀಡಲಾಗುತ್ತದೆ. ಹಾಗೂ 1.5 ಲಕ್ಷ ಜನರಿಗೆ ಮಧ್ಯಾಹ್ನ ಊಟ, ಶೇಂಗಾ ಹೋಳಿಗೆ, ಬದನೆಕಾಯಿ ಪಲ್ಯಾ, ಚಪಾತಿ, ಅನ್ನ, ಮೊಸರು, ಸಾಂಬಾರ್, ಉಪ್ಪಿನ ಕಾಯಿ, ಶೇಂಗಾ ಚಟ್ನಿ ನೀಡಲಾಗುತ್ತಿದೆ.
BIGG NEWS : ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಫೆಬ್ರವರಿ ಅಂತ್ಯಕ್ಕೆ ಲೋಕಾರ್ಪಣೆ : ಕೇಂದ್ರ ಸಚಿವ ನಿತಿನ್ ಗಡ್ಕರಿ