ಹಾವೇರಿ : ಹಾವೇರಿಯಲ್ಲಿ ಒಂದು ಮನಕಲಕುವ ಘಟನೆ ನಡೆದಿದ್ದು ಬೈಕ್ ಕೊಡಿಸದಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಇತ್ತ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಕೇಳಿ ತಾಯಿ ಕೂಡ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಣೆಬೆನ್ನೂರ ತಾಲೂಕಿನ ಕರೂರು ಗ್ರಾಮದಲ್ಲಿ ನಡೆದಿದೆ.
ಹೌದು ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಕರೂರು ಗ್ರಾಮದ ಯುವಕ ಧನರಾಜ್ ಸುರೇಶ್ ನಾಯಕ್ (18) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಗ ನೇಣು ಬಿಗಿದುಕೊಂಡಿದನ್ನು ನೋಡಿ ಮನನೊಂದು ತಾಯಿ ಭಾಗ್ಯಮ್ಮ (43) ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಧನರಾಜ್ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ. ನನಗೆ ಕಾಲೇಜಿಗೆ ಹೋಗಲು ಬೈಕ್ ಬೇಕು ಎಂದು ಹಠ ಮಾಡಿ ಜಗಳ ಮಾಡಿದ್ದ ಕೂಲಿ ಮಾಡಿಕೊಂಡಿದ್ದ ತಂದೆ ಸುರೇಶ್ ಮಗನಿಗೆ ಬೈಕ್ ಕೊಡಿಸುತ್ತೇನೆ ಎಂದು ತಿಳಿಸಿದ್ದರು. ತಂದೆ ತಾಯಿ ಹೊರಗಡೆ ಹೋದಾಗ ಧನರಾಜ ಅಡುಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮನೆಗೆ ಬರುತ್ತಿದ್ದಂತೆ ಮಗನ ಸ್ಥಿತಿ ಕಂಡು ದಂಗಾಗಿದ್ದ ತಾಯಿ ಭಾಗ್ಯಮ್ಮ, ಬಳಿಕ ಕರೂರ ರೈಲು ನಿಲ್ದಾಣದ ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಿನ ಕಾಲದ ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿದ್ದು ಹೆತ್ತವರು ಅವರನ್ನು ಅತ್ಯಂತ ಎಚ್ಚರಿಕೆಯಿಂದ ನಿಭಾಯಿಸಬೇಕಾದದ್ದು ಬಹಳ ಮುಖ್ಯವಾಗಿದೆ.