ಹಾವೇರಿ : ಹಾವೇರಿ ದುರಂತ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ 17 ಮಂದಿ ಪೈಕಿ 13 ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸ ವಾಹನ ಖರೀದಿಸಿ ಪೂಜೆ ಮಾಡಿ ಮರಳುವಾಗ ಈ ಘಟನೆ ನಡೆದಿದೆ. ವಾಹನ ಟಿಟಿ ಖರೀದಿಸಿ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡಿಸಿ ಮರಳುವಾಗ ಈ ಅಪಘಾತ ಸಂಭವಿಸಿದೆ.

ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನವರಾಗಿದ್ದಾರೆ. ಮೃತರ ಪೈಕಿ ಆದರ್ಶ್ ಎಂಬವರು ಒಂದೂವರೆ ತಿಂಗಳ ಹಿಂದೆ ಹೊಸ ಟಿಟಿ ವಾಹನ ಖರೀದಿಸಿದ್ದರು. ಅದರಲ್ಲಿ ಕುಟುಂಬದವರನ್ನು, ಸ್ನೇಹಿತರನ್ನು ಕರೆದುಕೊಂಡು ಮನೆ ದೇವರಿಗೆ ಪೂಜೆ ಸಲ್ಲಿಸಲೆಂದು ಪ್ರವಾಸ ಹೊರಟಿದ್ದರು. ಆ ಬಗ್ಗೆ ಆದರ್ಶ್ ಸ್ನೇಹಿತ ಮಾತನಾಡಿದ್ದಾರೆ.

ಆದರ್ಶ್ ಅವರ ಗೆಳೆಯ ಸಾಗರ್ ಎನ್ನುವವರು ಮಾತನಾಡಿದ್ದು, ಚಾಲಕ ಆದರ್ಶ್ ಹೊಸ ಟಿಟಿ ವಾಹನ ಖರೀದಿಸಿ ಕುಟುಂಬ ಸಮೇತ ದೇವರ ದರ್ಶನ ಹಾಗೂ ವಾಹನ ಪೂಜೆ ಮಾಡಿಸಲು ತೆರಳಿದ್ದರು. ನಿನ್ನೆ ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ಟೆಂಪಲ್ ನಲ್ಲಿ ವಾಹನ ಪೂಜೆ ಮಾಡಿಸಲಾಗಿತ್ತು. ಹಿಂದಿರುವ ವೇಳೆ ಮಾಯಮ್ಮನ ದೇವಸ್ಥಾನಕ್ಕೆ ತೆರಳಿ ದರ್ಶನ್ ಪಡೆಯಲಾಗಿತ್ತು. ಚಾಲಕ ಆದರ್ಶ್ ವಾಹನ ಪೂಜೆ ಫೋಟೋಗಳನ್ನು ವ್ಯಾಟ್ಸ್ಆ್ಯಪ್ ಸ್ಟೇಟಸ್ ಹಾಕಿಕೊಂಡಿದ್ದ.

ನಾಲ್ವರು ಗಾಯಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು 13 ಮಂದಿ ಮೃತಪಟ್ಟಿದ್ದಾರೆ. ಪರಶುರಾಮ್ (45), ಭಾಗ್ಯ (40), ನಾಗೇಶ್(50), ವಿಶಾಲಾಕ್ಷಿ(50)ಸುಭದ್ರಾ ಭಾಯಿ(65), ಪುಣ್ಯ( 50), ಮಂಜುಳಾ ಭಾಯಿ( 57), ಚಾಲಕ ಆದರ್ಶ್ ( 23), ಮಾನಸಾ( 24), ರೂಪಾ( 40),ಮಂಜುಳಾ( 50) ಮೃತಪಟ್ಟಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Share.
Exit mobile version