ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರಿಗೆ ಗ್ಯಾರಂಟಿ ಕಾರ್ಡ್ ಗಳ ಮೂಲಕ ಅಮಿಷ ಒಡ್ಡಲಾಗಿತ್ತು. ಹೀಗಾಗಿ ಈ ಬಾರಿ ಲೋಕಸಭೆ ಚುನಾವಣೆ ವೇಳೆ ಮತದಾರರಿಗೆ ಆಮಿಷ ಒಡ್ಡದಂತೆ ಕ್ರಮ ಕೋರಿ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಇತರರು ಸಲ್ಲಿಸಿದ ಪಿಐಎಲ್ ಅನ್ನು ಹೈಕೋರ್ಟ್ ವಿಚಾರಣೆ ನಡೆಸಿತು.
ಚುನಾವಣೆ ವೇಳೆ ಮತದಾರರಿಗೆ ಆಮಿಷ ಒಡದಂತೆ ಕ್ರಮ ಕೋರಿ ಇದೀಗ ಹೈಕೋರ್ಟಿಗೆ ಪಿ ಐ ಎಲ್ ಸಲ್ಲಿಸಲಾಗಿದೆ. ಹೈಕೋರ್ಟಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಮತ್ತಿತರರ PIL ಅರ್ಜಿ ಸಲ್ಲಿಸಲಾಗಿದ್ದು ಅರ್ಜಿಯ ಕುರಿತು ಆಕ್ಷೇಪಣೆ ಸಲ್ಲಿಸಲು ಚುನಾವಣಾ ಆಯೋಗ ಕಾಲಾವಕಾಶ ಕೋರಿದೆ. ಹೀಗಾಗಿ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್ 2 ವಾರಗಳ ಕಾಲ ಮುಂದೂಡಿತು.
ಆಧುನಿಕ ತಂತ್ರಜ್ಞಾನ ಬಳಸಿ ಮತದಾರರಿಗೆ ಅಮಿಷ ಒಡ್ಡಲಾಗುತ್ತಿದೆ. ಮತದಾರರಿಗೆ ಗ್ಯಾರಂಟಿ ಕಾರ್ಡ್ ನೀಡಿ ಆಮಿಷ ಒಡ್ಡಲಾಗಿದೆ.ಇದರಿಂದ ನಿಷ್ಪಕ್ಷಪಾತ ಚುನಾವಣೆ ನಡೆಯುವುದು ಸಾಧ್ಯವಿಲ್ಲ.ಕರ್ನಾಟಕ ಮಾಡೆಲ್ ಮರುಕಳಿಸದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ. ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿದೆ. 2023 ವಿಧಾನಸಭಾ ಚುನಾವಣೆಯ ವೇಳೆಯ ಅಕ್ರಮ ಉಲ್ಲಂಘಿಸಿ ಪಿಐಎಲ್ ಸಲ್ಲಿಸಲಾಗಿದೆ.