ಬೆಂಗಳೂರು: ಬಿಬಿಎಂಪಿ ಚುನಾವಣೆಗಾಗಿ ( BBMP Election ) ಮತ್ತೆ ಮೂರು ತಿಂಗಳ ಕಾಲ ಕಾಲಾವಕಾಶ ನೀಡುವಂತೆ ಹೈಕೋರ್ಟ್ ಗೆ ಸರ್ಕಾರ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಹೈಕೋರ್ಟ್ ಮುಂದೂಡಿಕೆ ಮಾಡಿದೆ.
ರೈತರಿಗೆ ಸದಾ ಪ್ರೋತ್ಸಾಹ ನೀಡುವ ಬಿಜೆಪಿ – ರೈತ ಮೋರ್ಚಾ ಪ್ರಭಾರಿ ಎನ್.ರವಿಕುಮಾರ್
ಇಂದು ಹೈಕೋರ್ಟ್ ನ ಏಕ ಸದಸ್ಯ ನ್ಯಾಯಪೀಠದಲ್ಲಿ ಅರ್ಜಿಯ ವಿಚಾರಣೆ ಆರಂಭವಾಗುತ್ತಿದ್ದಂತೇ, ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ ಎನ್ ಫಣೀಂದ್ರ ಅವರು, ಚುನಾವಣೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆ ಡಿಸೆಂಬರ್ 9ರಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂಬುದಾಗಿ ನ್ಯಾಯಾಲಾಯಕ್ಕೆ ಮನವರಿಕೆ ಮಾಡಿಕೊಟ್ಟರು.
ಈ ಹಿನ್ನಲೆಯಲ್ಲಿ ಬಿಬಿಎಂಪಿ ಚುನಾವಣೆಗೆ 3 ತಿಂಗಳ ಕಾಲಾವಕಾಶ ಕೇಳಿ ಸರ್ಕಾರ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 14ಕ್ಕೆ ಮುಂದೂಡಿತು. ಈ ಮೂಲಕ ಸುಪ್ರೀಂ ಕೋರ್ಟ್ ನಲ್ಲಿ ಯಾವ ರೀತಿಯ ತೀರ್ಪು ಬಿಬಿಎಂಪಿ ಚುನಾವಣೆಗಾಗಿ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ – MLC ಎನ್.ರವಿಕುಮಾರ್