ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ಸೂಚಿಸಲು ಕೋರಿ ಗಿರೀಶ್ ಭಾರದ್ವಾಜ್ ಹಾಗೂ ಆರ್. ಆನಂದ ಮೂರ್ತಿ ಎಂಬುವವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ಅರ್ಜಿಯನ್ನು ಆಗಸ್ಟ್ 1ಕ್ಕೆ ಮುಂದೂಡಿತು.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ಅರ್ಜಿಯನ್ನು ಆಗಸ್ಟ್ 1ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಅರುಣ್ ಶ್ಯಾಮ್, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿತ್ತು. ಈ ಸಂಬಂಧ ರಾಜ್ಯ ಸರ್ಕಾರ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲು ತೀರ್ಮಾನಿಸಿದೆ. ಈ ಮೂಲಕ ಯು-ಟರ್ನ್ ತೆಗೆದುಕೊಂಡಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೆ ತೀವ್ರ ತರದ ತೊಂದರೆಯಾಗಲಿದೆ. ಆದ್ದರಿಂದ ಎನ್ಇಪಿ ಜಾರಿಗೆ ನಿರ್ದೇಶನ ನಿಡಬೇಕು ಎಂದು ಕೋರಿದರು.
ಈ ವೇಳೆ ವಕೀಲರು, ಎನ್ಇಪಿ ದೇಶಾದ್ಯಂತ ಜಾರಿ ಮಾಡುವ ಮೂಲಕ ಒಂದು ದೇಶ ಒಂದು ಶಿಕ್ಷಣ ನೀತಿ ಪರಿಕಲ್ಪನೆಯಾಗಿದೆ. ಈ ಹಿಂದೆ ಇದ್ದ ಸರ್ಕಾರ ಹಂತ ಹಂತವಾಗಿ ಜಾರಿ ಮಾಡುವುದಕ್ಕೆ ನಿರ್ಧಾರ ಮಾಡಿತ್ತು. ಈಗಾಗಲೇ ವಿಶ್ವವಿದ್ಯಾಲಯಗಳು ಎನ್ಇಪಿ ಶಿಕ್ಷಣ ಪದ್ದತಿಯನ್ನು ಅನುಸರಿಸುತ್ತಿವೆ. ಈಗ ಸರ್ಕಾರ ಬದಲಾವಣೆ ಮಾಡುತ್ತಿದೆ ಎಂದು ಪೀಠಕ್ಕೆ ವಿವರಿಸಿದರು. ಅಂತಿಮವಾಗಿ ನ್ಯಾಯಪೀಠ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ಅರ್ಜಿಯನ್ನು ಆಗಸ್ಟ್ 1ಕ್ಕೆ ಮುಂದೂಡಿತು.