ಬೆಂಗಳೂರು: ರಾಜ್ಯದಲ್ಲಿ ಶೇ.60ರಷ್ಟು ಮಳಿಗೆಗಳು ನಾಮಫಲಕಗಳಲ್ಲಿ ಕನ್ನಡವನ್ನು ಹಾಕುವುದು ಕಡ್ಡಾಯಗೊಳಿಸಲಾಗಿತ್ತು. ಇದಕ್ಕಾಗಿ ಅಧಿಕೃತ ಆದೇಶವನ್ನು ಕೂಡ ಮಾಡಲಾಗಿತ್ತು. ಇದರ ನಡುವೆ ಶೇ.60ರಷ್ಟು ಕನ್ನಡ ಬೋರ್ಡ್ ಹಾಕದ ಮಳಿಗೆಗಳಿಗೆ ಬೀಗ ಹಾಕುವಂತಿಲ್ಲ ಎಂಬುದಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಸಂಬಂಧ ಮಳಿಗೆಗಳ ಸಂಘದಿಂದ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ವಿಚಾರಣೆ ನಡೆಸಿದರು. ಶೇ.60ರಷ್ಟು ಕನ್ನಡ ನಾಮಫಲಕ ಹಾಕಿದ್ರೆ ಸಮಸ್ಯೆ ಏನು ಮಳಿಗೆಗಳ ಮಾಲೀಕರಿಗೆ ಎಂಬುದಾಗಿ ಮಳಿಗೆಗಳ ಪರ ವಕೀಲರಿಗೆ ಪ್ರಶ್ನಿಸಿದರು.
ಈ ವೇಳೆ ನ್ಯಾಯಪೀಠದ ಮುಂದೆ ವ್ಯಾಪಾರಿಗಳ ಸಂಘದ ಪರ ವಕೀಲರು, ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ-2022 ಸಮರ್ಪಕವಾಗಿ ಜಾರಿಯಾಗಿಲ್ಲ. ಜಾರಿಯ ದಿನಾಂಕದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿಲ್ಲ. ಡಿಜಿಟಲ್ ನಾಮಫಲಕಗಳನ್ನು ಬದಲಿಸೋದಕ್ಕೆ ಕಾಲಾವಕಾಶ ಬೇಕು. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಹಾಕದಿದ್ದದೇ ಮಳಿಗೆಗಳನ್ನು ಮುಚ್ಚಲಾಗುತ್ತಿದೆ. ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸುವಂತೆ ಮನವಿ ಮಾಡಿತು.
ಈ ವಾದವನ್ನು ಪುರಸ್ಕರಿಸಿದಂತ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಶೇ.60ರಷ್ಟು ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕಾಯ್ದೆ ಜಾರಿ ಬಗ್ಗೆ ಗೆಜೆಟ್ ಅಧಿಸೂಚನೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತು. ಜೊತೆಗೆ ಬಲವಂತವಾಗಿ ಕನ್ನಡ ನಾಮಫಲಕ ಹಾಕದಂತ ಮಳಿಗೆಗಳನ್ನು ಮುಚ್ಚದಂತೆ ಸೂಚಿಸಿದೆ.
BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಾಳೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು
BREAKING: ತುಮಕೂರಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ‘8 ಲಕ್ಷ’ ಹಣ ಜಪ್ತಿ