ಬೆಂಗಳೂರು: ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಐವರು ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.
545 ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ 6 ಆರೋಪಿಗಳಿಂದ ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು. ಹೈಕೋರ್ಟ್ ನ್ಯಾ.ಹೆಚ್.ಪಿ.ಸಂದೇಶ್ ಏಕಸದಸ್ಯ ಪೀಠದಿಂದ ಅರ್ಜಿ ವಿಚಾರಣೆ ನಡೆದಿದ್ದು, ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.
ಆರೋಪಿಗಳಾದ ಸಿ.ಎನ್.ಶಶಿಧರ್, ಆರ್.ಶರತ್ ಕುಮಾರ್, ದಿಲೀಪ್ ಕುಮಾರ್, ಸೂರ್ಯನಾರಾಯಣ, ರಘುವೀರ್, ಹೆಚ್.ಆರ್ ಪ್ರವೀಣ್ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಇನ್ನು ಆರೋಪಿ ನವೀನ್ ಪ್ರಸಾದ್ ನಿರೀಕ್ಷಣಾ ಜಾಮೀನು ಕೂಡ ವಜಾಗೊಂಡಿದೆ. ನವೀನ್ ಪ್ರಸಾದ್ ಬ್ಯಾಡರಹಳ್ಳಿ ಪಿ ಎಸ್ ಐ ಆಗಿದ್ದು, ಪ್ರಕರಣ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದು, ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.