ಬೆಂಗಳೂರು: ನಮ್ಮ ಮೆಟ್ರೋ ದರವನ್ನು ಹೆಚ್ಚಳ ಮಾಡಲಾಗಿತ್ತು. ಆ ಬಳಿಕ ಪ್ರಯಾಣಿಕರ ಸಂಖ್ಯೆಯೂ ಇಳಿಕೆಯಾಗಿತ್ತು. ಅಲ್ಲದೇ ಅವೈಜ್ಞಾನಿಕವಾಗಿ ದರ ಹೆಚ್ಚಳ ಮಾಡಿದ್ದರ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಕೆಲ ವ್ಯತ್ಯಾಸದ ದರಗಳನ್ನು ಸರಿ ಮಾಡಲಾಗಿತ್ತು. ಆದರೇ ಈ ದರ ಏರಿಕೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಜಾಗೊಳಿಸಲಾಗಿದೆ.
ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸನತ್ ಕುಮಾರ್ ಶೆಟ್ಟಿ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ್ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿದೆ.
ಇದು ತಜ್ಞರ ಸಮಿತಿಯ ನಿರ್ಧಾರವಾಗಿದೆ. ಈ ತೀರ್ಮಾನದಲ್ಲಿ ಹೈಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ. ದರ ನಿಗದಿ ಸಮಿತಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದೆ ಎಂಬುದಾಗಿ ಅಭಿಪ್ರಾಯ ಪಟ್ಟು, ಸತತ್ ಕುಮಾರ್ ಶೆಟ್ಟಿ ಎಂಬುವರು ಸಲ್ಲಿಸಿದ್ದಂತ ಪಿಐಎಲ್ ವಜಾಗೊಳಿಸಿದೆ. ಆ ಮೂಲಕ ನಮ್ಮ ಮೆಟ್ರೋ ದರ ಏರಿಕೆ ಪ್ರಶ್ನಿಸಿದ್ದಂತ ಅರ್ಜಿ ವಜಾಗೊಂಡಂತೆ ಆಗಿದೆ.
‘ಮ್ಯಾನ್ಮಾರ್’ನಲ್ಲಿ ಪ್ರಬಲ ಭೂಕಂಪನ: ದುರಂತದ ‘ಉಪಗ್ರಹ ಚಿತ್ರ’ ಬಿಡುಗಡೆ ಮಾಡಿದ ‘ISRO’ | Myanmar earthquake
BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ