ಬೆಂಗಳೂರು: ಕಾಂಗ್ರೆಸ್ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಮತ್ತೆ ಬಿಗ್ ಶಾಕ್ ನೀಡಿದೆ. ಅದೇ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ನೀಡಲಾಗಿತ್ತು. ಅಲ್ಲದೇ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅವರು ಅರ್ಜಿ ಸಲ್ಲಿಸಿದ್ದರು.
ಇಂದು ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು, ಪ್ರಕರಣ ರದ್ದುಗೊಳಿಸೋದಕ್ಕೆ ನಕಾರ ವ್ಯಕ್ತ ಪಡಿಸಿದೆ. ಅಲ್ಲದೇ ಪ್ರಕರಣ ರದ್ದುಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ.
ಇದಲ್ಲದೇ ಸಿಬಿಐ ಪರ ಅಭಿಯೋಜಕರಿಗೆ ಹೈಕೋರ್ಟ್ ಸಾಕ್ಷ್ಯ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಿದೆ.
BREAKING NEWS : 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ !
BREAKING : ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಿರ್ದೇಶಕಿ ‘ಐಶ್ವರ್ಯಾ ರಜನಿಕಾಂತ್, ಧನುಷ್’