ಬೆಂಗಳೂರು : ಬಿಜೆಪಿ ಆಡಳಿತದಲ್ಲಿ ನಡೆದಿದೆ ಎನ್ನಲಾದ ಬಿಬಿಎಂಪಿ ಕಾಮಗಾರಿಯಲ್ಲಿ 40% ಕಮಿಷನ್ ಹಾಗೂ ಕಳೆದ 4 ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ಏಕ ವ್ಯಕ್ತಿ ಸಮಿತಿಗೆ ವರದಿ ಸಲ್ಲಿಸಲು ಹೈಕೋರ್ಟ್ ಮತ್ತೆ ಆರು ವಾರಗಳ ಗಡುವು ನೀಡಿ ಆದೇಶಿಸಿದೆ.
ರಾಜ್ಯ ಸರ್ಕಾರ ನ್ಯಾ.ನಾಗಮೋಹನ್ ದಾಸ್ ಅವರ ಏಕವ್ಯಕ್ತಿ ಸಮಿತಿ ರಚಿಸಿ 2023ರ ಆ. 5ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಮೆರ್ಸಸ್ ನಿಕ್ಷೇಪ್ ಇನ್ಸಾ ಪ್ರಾಜೆಕ್ಟ್ಸ್ ಸೇರಿ ಹಲವು ಗುತ್ತಿಗೆ ಕಂಪನಿಗಳು ಮತ್ತು ಗುತ್ತಿಗೆದಾರರು ಸಲ್ಲಿಸಿದ್ದ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗ ಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ಎಲ್ಲ ಪಾಲುದಾರರು ವಾದ ಮತ್ತು ಎಲ್ಲ ದಾಖಲೆಗ ಳನ್ನು ಪರಿಗಣಿಸಿದ ನಂತರ ಸಮಿತಿ 45 ದಿನಗಳಲ್ಲಿ ವಿಚಾರಣೆ ಪೂರ್ಣಗೊಳಿಸಿ ವರದಿಯನ್ನು ಹೈಕೋಟ್ ್ರಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂದು 2023ರ ಡಿ.13ರಂದು ನಿರ್ದೇಶಿಸಿದ್ದರೂ ಈವರೆಗೂ ವಿಚಾರಣೆಯೇ ಆರಂಭವಾಗಿಲ್ಲ ಎಂಬ ವಿಷಯ ತಿಳಿದು ಆಶ್ಚರ್ಯಗೊಂಡ ನ್ಯಾಯಪೀಠ, ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ರಾಜ್ಯ ಅಡ್ವಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರ ಮನವಿ ಮೇರೆಗೆ ಮತ್ತೆ ಆರು ವಾರ ಕಾಲಾವಾಶ ನೀಡಿತು.
ಮುಂದಿನ ಆರು ವಾರಗಳಲ್ಲಿ ವಿಚಾರಣಾ ಸಮಿತಿ ವಿಚಾರಣೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು. ಇದೇ ಕೊನೆಯ ಬಾರಿಗೆ ಕಾಲಾವಕಾಶ ನೀಡಲಾಗುತ್ತಿದೆ. ಒಂದು ವೇಳೆ ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸದೆ ಹೋದರೆ, ಗುತ್ತಿಗೆದಾರರಿಗೆ ಶೇ.100ರಷ್ಟು ಬಿಲ್ ಪಾವತಿಸುವಂತೆ ಸರ್ಕಾರಕ್ಕೆ ಆದೇಶಿ 1 ಸಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಏ.2ಕ್ಕೆ ಮುಂದೂಡಿತು.