ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಬೆಂಗಳೂರು ನಗರ ಸಿಟಿ ಸಿವಿಲ್ ನ್ಯಾಯಾಲಯವು ಮಧ್ಯಂತರ ತಡೆ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಲಾಗಿತ್ತು. ಹೈಕೋರ್ಟ್ ಸಿಟಿ ಸಿವಿಲ್ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ಚುನಾವಣೆ ಫಿಕ್ಸ್ ಆದಂತೆ ಆಗಿದೆ.
ಈ ಬಗ್ಗೆ ರಾಜ್ಯ ಚುನಾವಣಾಧಿಕಾರಿ ಎ ಹನುಮನರಸಯ್ಯ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿಯಾದ ಎ. ಹನುಮನರಸಯ್ಯ ಆದ ನಾನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ಜಿಲ್ಲೆ, ತಾಲ್ಲೂಕು, ಯೋಜನಾ ಶಾಖೆಗಳು ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್ ಸದಸ್ಯ ಸ್ಥಾನದ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ದಿನಾಂಕ: 12-09-2024 ರಂದು ಸಂಘದ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸಿರುತ್ತೇನೆ ಎಂದಿದ್ದಾರೆ.
ಅದರಂತೆ ದಿನಾಂಕ: 17-09-2024 ರಿಂದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯ ಸ್ಥಾನದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಈಗಾಗಲೇ ಅಂತಿಮವಾಗಿ ಚುನಾವಣಾ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿ ಹಾಗೂ ಅವಿರೋಧವಾಗಿ ಆಯ್ಕೆಯಾದವರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮುಂದುವರೆದು, ಅವಿರೋಧವಾಗಿ ಆಯ್ಕೆಯಾಗದ ಮತಕ್ಷೇತ್ರಗಳನ್ನು ಹೊರತುಪಡಿಸಿ ಇನ್ನುಳಿದ ಮತಕ್ಷೇತ್ರಗಳ ಚುನಾವಣೆಗಳು ದಿನಾಂಕ: 08-10-2024 ರಿಂದ ಆರಂಭವಾಗಲಿವೆ ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಸಂಬಂಧ ಕೃಷ್ಣಯ್ಯ, ದ್ವಿ.ದ.ಸ. ಲೋಕೋಪಯೋಗಿ ಇಲಾಖೆ, ಇಲಾಖೆ, ಬೆಂಗಳೂರು ಇವರು ಬೆಂಗಳೂರು ನಗರ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ಸಂಬಂಧ ನ್ಯಾಯಾಲಯವು ಎದುರುದಾರರಾದ ಕರ್ನಾಟಕ ನೌಕರರ ಸಂಘಕ್ಕೆ ಯಾವುದೇ ಮಾಹಿತಿ ನೀಡದೆ ex- party ಮಾಡಿ ಚುನಾವಣಾಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, (O.S NO: 6981/2024) ಈ ಸಂದರ್ಭದಲ್ಲಿ ದೂರುದಾರರು ಸಂಘದ ಹಳೆಯ ಬೈಲಾವನ್ನು ಸಲ್ಲಿಸಿ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿರುತ್ತಾರೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು ಪೀಠದಲ್ಲಿ ದಿನಾಂಕ 04-10-2024 ರಂದು ಪ್ರಕರಣ ಸಂಖ್ಯೆ: W.P. No. 27308/2024 ಅನ್ನು ದಾಖಲಿಸಿದ್ದು, ಮಾನ್ಯ ನ್ಯಾಯಾಲಯವು ದಾವೆಗೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿ ಪೂರಕ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಶ್ರೀ ಕೃಷ್ಣಯ್ಯರವರ ದೂರಿಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಸಿಟಿ ಸಿವಿಲ್ ನ್ಯಾಯಾಲಯವು ನೀಡಿದ್ದ ಮಧ್ಯಂತರ ತಡೆ ಆದೇಶಕ್ಕೆ ತಡೆಯಾಜ್ಞೆ ನೀಡಿ ಚುನಾವಣಾ ಪ್ರಕ್ರಿಯೆಗಳನ್ನು ಮುಂದುವರೆಸಲು ಇಂದು ಘನ ಉಚ್ಛ ನ್ಯಾಯಾಲಯ ಆದೇಶ ನೀಡಿರುತ್ತದೆ ಎಂದಿದ್ದಾರೆ.
ಕರ್ನಾಟಕ ಘನ ಉಚ್ಛ ನ್ಯಾಯಾಲಯದ ಆದೇಶದಂತೆ ದಿನಾಂಕ: 12-09-2024ರಂದು ಹೊರಡಿಸಿದ್ದ ಎಲ್ಲಾ ಹಂತದ ಚುನಾವಣೆಗಳ ಪ್ರಕ್ರಿಯೆಗಳು ಯಥಾವತ್ತಾಗಿ ಮುಂದುವರೆಯಲಿವೆ ಎಂದು ಹೇಳಿದ್ದಾರೆ.
‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್