ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ 2022ರಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸುವಂತೆ ಮಾಡಲಾಗಿದ್ದ ಮನವಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ಈ ತೀರ್ಪಿನ ವಿರುದ್ಧ ಸಿದ್ದರಾಮಯ್ಯ ಅವರು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ಇದೀಗ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ನಡೆಸಲಿದೆ.ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್, ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಒಳಗೊಂಡ ಪೀಠವು ಈ ಕುರಿತು ವಿಚಾರಣೆ ನಡೆಸುವ ಸಾಧ್ಯತೆ ಇದೆ.
UPDATE : ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಪ್ರಕರಣ : ಮಾಲೀಕನ ವಿರುದ್ಧ FIR ದಾಖಲು
ಸಿದ್ದರಾಮಯ್ಯ, ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯೂ ಆದ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರಿಗೆ ತಲಾ 10,000 ದಂಡ ವಿಧಿಸಿದ್ದ ಹೈಕೋರ್ಟ್, ಎಲ್ಲರೂ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಬೇಕು ಎಂದು ಫೆಬ್ರುವರಿ 6ರಂದು ತೀರ್ಪು ನೀಡಿತ್ತು.
ಸಿದ್ದರಾಮಯ್ಯ ಅವರ ವಕೀಲ ರಾಜೇಶ್ ಗುಲಾಬ್ ಇನಾಮದಾರ್ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.ಪ್ರತಿಭಟನಾ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಯಾರಿಗೂ ಇದರಿಂದ ತೊಂದರೆ ಆಗಿಲ್ಲ. ಈ ಕ್ರಿಮಿನಲ್ ಪ್ರಕರಣದ ನ್ಯಾಯಿಕ ಪ್ರಕ್ರಿಯೆ ಮುಂದುವರಿಸುವುದರಿಂದ ಕಾನೂನು ದುರುಪಯೋಗ ಆಗುತ್ತದೆ ಎಂದು ಸಿದ್ದರಾಮಯ್ಯ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.
BREAKING : ಮೈಸೂರು : ಅಸ್ತಿಗಾಗಿ ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯ ಕೊಲೆಗೈದ ಪತಿ