ಗಳೂರು : ಸರ್ಕಾರಿ ನೇಮಕಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ.10ರಷ್ಟು ಮೀಸಲು ಕಲ್ಪಿಸಿ ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಂದಿರುವ ತಿದ್ದು ಪಡಿ ನಿಯಮವನ್ನು ಸಮರ್ಪಕವಾಗಿ ಜಾರಿಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.
ಗೌರವ ಡಾಕ್ಟರೇಟ್ ಹೆಸರಿನ ಮುಂದೆ ‘ಡಾ.’ ಪದ ಬಳಕೆ ನಿರ್ಬಂಧಿಸಿದ ರಾಜ್ಯ ಸರ್ಕಾರ
ಈ ಕುರಿತಂತೆ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್ ) ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್‌ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹಾಜರಾಗಿ, ಸರ್ಕಾರಿ ನೇಮಕಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲು ಕಲ್ಪಿಸಲು ಭಾರತದ ಸಂವಿಧಾನಕ್ಕೆ 103ನೇ ತಿದ್ದುಪಡಿ ತಂದಿತ್ತು.ಆದರೆ, ಈವರೆಗೂ ಈ ತಿದ್ದುಪಡಿ ನಿಯಮಗಳು ಅನುಷ್ಟಾನಕ್ಕೆ ಬಂದಿಲ್ಲ. ಈ ಸಂಬಂಧ 2024ರ ಜ.15ರಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆಗೆ ಮನವಿ ಮಾಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಧಾರ್ಮಿಕ ಗತ್ತಿ ವಿಧೇಯಕ ಅಂಗೀಕಾರ, ದೇವಸ್ಥಾನದ ಆದಾಯದ ಶೇ.10 ರಷ್ಟು ಹಣ ರಾಜ್ಯ ಸರ್ಕಾರಕ್ಕೆ
ಶೇ.10ರಷ್ಟು ಮೀಸಲಾತಿ ನೀಡುವ ಸಂಬಂಧ ಕೇಂದ್ರ ಸರ್ಕಾರ 2019ರ ರ ಜ.12ರಂದು 103ನೇ ಸಂವಿಧಾನಕ್ಕೆ ತಿದ್ದುಪಡಿ ತಂದು ಪರಿಚ್ಛೇದ 14 ಮತ್ತು 16(6)ನೇ ವಿಧಿಗೆ ಸೇರ್ಪಡಿಸಿದೆ. ಕೇಂದ್ರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಸುಪ್ರೀಂಕೋರ್ಟ್ ಕೇಂದ್ರದ ಕ್ರಮವನ್ನು ಎತ್ತಿಹಿಡಿದಿದೆ. ಈ ನಿರ್ಧಾರಕ್ಕೆ ಸಂವಿಧಾನದ ಮಾನ್ಯತೆ ಸಿಕ್ಕಂತಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.