ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಲಾಂಛನ ಹಾಗೂ ಚಿಹ್ನೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತಂತೆ ಕಟ್ಟುನಟ್ಟಿನ ಕಾನೂನು ಕ್ರಮ ಜಾರಿ ಗೊಳಿಸುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
BREAKING : ಮಂಡ್ಯದಲ್ಲಿ ಭೀಕರ ಕೊಲೆ : ಮಗಳಿಗೆ ಆಸ್ತಿಯಲ್ಲಿ ಹೆಚ್ಚಿನ ಪಾಲನ್ನು ಕೊಟ್ಟಿದ್ದಕ್ಕೆ ತಂದೆಯನ್ನು ಕೊಂದ ಮಗ
ಮಾನವ ಹಕ್ಕುಗಳ ಆಯೋಗ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಂವಿಧಾನಿಕ ಸಂಸ್ಥೆಗಳ ಹೆಸರು, ಲಾಂಛನ ಮತ್ತು ಚಿಹ್ನೆ ಹೋಲುವಂತಹ ಹೆಸರು, ಲಾಂಛನ ಮತ್ತು ಚಿಹ್ನೆಗಳನ್ನು ಖಾಸಗಿ ವ್ಯಕ್ತಿಗಳು ಮತ್ತು ಸಂಘ-ಸಂಸ್ಥೆಗಳು ತಮ್ಮ ವಾಹನಗಳ ನಂಬರ್ ಪ್ಲೇಟ್‌ಗಳ ಮೇಲೆ ಹಾಕಿಕೊಳ್ಳುತ್ತಿರುವ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿ ಆರ್. ದೇವದಾಸ್ ಅವರ ಏಕಸದಸ್ಯ ಈ ಹಿಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.
ಕನಸಿನಲ್ಲಿ ದೇವರು ಕಂಡರೆ ಹೀಗೆಲ್ಲ ಆಗುತ್ತ!ಯಾವುದೆಲ್ಲ ಸೂಚನೆಗಳನ್ನು ಕೊಡಲು ಬಂದಿರಬಹುದು!
ಜತೆಗೆ, ಇದನ್ನು ತಡೆಯಲು ಕಾಯ್ದೆ-ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಆ ನಿಟ್ಟಿನಲ್ಲಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸುವಂತೆ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಗೆ 2023ರ ಜೂ.9ರಂದು ನಿರ್ದೇಶಿತ್ತು. ಅದರಂತೆ ಈ ಅರ್ಜಿ ದಾಖಲಿಸಲಾಗಿದೆ.
‘ಪಾಕಿಸ್ತಾನ’ ಪರ ಘೋಷಣೆ ಆರೋಪ : ‘FSL’ ವರದಿ ಸಾಬೀತಾದರೆ ಯಾರೇ ಇದ್ದರು ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ
ಕಾನೂನು ಸೇವೆಗಳ ಸಮಿತಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆ ನಡೆಸಿದಾಗ,ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಕೇಂದ್ರ ಗೃಹ ಸಚಿವಾಲಯದ ನಿರ್ದೇಶಕರು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯದ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿತು.