ಬೆಂಗಳೂರು: ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧೀಕರಣಕ್ಕೆ (KAT) ಸದಸ್ಯರನ್ನು ನೇಮಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಹಾಜರಾಗಿ, ಸರ್ಕಾರಿ ನೌಕರರ ಸೇವಾ ವಿಚಾರಕ್ಕೆ ಸಂಬಂಧಿಸಿದ ವ್ಯಾಜ್ಯಗಳನ್ನು ಕೆಎಟಿ ವಿಚಾರಣೆ ನಡೆಸಲಿದೆ. ಬೆಂಗಳೂರಿನಲ್ಲಿ ಕೆಎಟಿಯ ಪ್ರಧಾನ ಪೀಠವಿದ್ದರೆ, ಕಲಬುರಗಿ ಹಾಗೂ ಬೆಳಗಾವಿಯಲ್ಲಿ ಪ್ರಾದೇಶಿಕ ಪೀಠಗಳಿವೆ. ಕೆಎಟಿಯಲ್ಲಿ ಅಧ್ಯಕ್ಷರಲ್ಲದೇ ಒಟ್ಟು 9 ಮಂದಿ ಸದಸ್ಯರ ಹುದ್ದೆಗಳಿವೆ.
ಅದರಲ್ಲಿ ಅಧ್ಯಕ್ಷ,ಇತರೆ 4ನ್ಯಾಯಾಂಗ ಸದಸ್ಯರ ಹುದ್ದೆಗಳಿ ವೆ. ಪ್ರಧಾನ ಪೀಠದಲ್ಲಿ ಅಧ್ಯಕ್ಷರು ಸೇರಿ ಇಬ್ಬರು ನ್ಯಾಯಾಂಗ ಸದಸ್ಯರಿದ್ದಾರೆ. 3 ಕೋರ್ಟ್ ಹಾಲ್‌ಗಳಿವೆ. ಪ್ರಾದೇಶಿಕ ಪೀಠದಲ್ಲಿ ತಲಾ1 ಕೋರ್ಟ್ ಹಾಲ್‌ಗಳಿವೆ ಎಂದು ಅವರು ನ್ಯಾಯಾಧಿಶರಿಗೆ ವಿವರಿಸಿದರು.
ಈ ಕುರಿತಂತೆ ವಕೀಲ ನರಸಿಂಹರಾಜು ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರತಿವಾದಿಗಳಾದ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಕೆಎಟಿ ರಿಜಿಸ್ಟ್ರಾರ್ ಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಿತು.