ಬೆಂಗಳೂರು: ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ( Congress Party ) ಕೆಜಿಎಫ್ ಚಿತ್ರದ ಹಾಡನ್ನು ( KGF Movie Song ) ಅನುಮತಿ ಇಲ್ಲದೇ ಬಳಕೆ ಮಾಡಿಕೊಳ್ಳಗಾಗಿತ್ತು. ಈ ಸಂಬಂಧ ಎಂ ಆರ್ ಟಿ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ಹಾಡವನ್ನ ತೆಗೆದು ಹಾಕುವಂತೆ ಆದೇಶಿಸಿತ್ತು. ಆದ್ರೇ ಕಾಂಗ್ರೆಸ್ ಹಾಡು ತೆಗೆದು ಹಾಕದ ಹಿನ್ನಲೆಯಲ್ಲಿ ಹೈಕೋರ್ಟ್ ( Karnataka High Court ) ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ( Congress Leader Rahul Gandhi ) ಸೇರಿದಂತೆ ಕೈ ನಾಯಕರಿಗೆ ನೋಟಿಸ್ ಜಾರಿಗೊಳಿಸಿದೆ.
BREAKING NEWS: ಬಿಜೆಪಿಗೆ ರೌಡಿ ಶೀಟ್ ಸೇರ್ಪಡೆ ವಿವಾದದ ಬೆನ್ನಲ್ಲೇ, ಆನೇಕಲ್ ಪುರಸಭೆಗೆ ರೌಡಿಶೀಟರ್ ನಾಮನಿರ್ದೇಶನ
ಈ ಸಂಬಂಧ ಕೆಜಿಎಫ್-2 ಹಾಡಿನ ಹಕ್ಕನ್ನು ಹೊಂದಿರುವಂತ ಎಂ ಆರ್ ಟಿ ಸಂಸ್ಥೆ ಹೈಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಹೈಕೋರ್ಟ್ ನ ನ್ಯಾಯಮೂರ್ತಿ ಪಿ.ಬಿ ವರಾಲೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ವಿಚಾರಣೆ ನಡೆಸಿತು.
ಹೈಕೋರ್ಟ್ ನ್ಯಾಯಪೀಠವು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಮಾಧ್ಯಮ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್, ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಥೆಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಕೆಜಿಎಫ್-2 ಹಾಡಿನ ಕೃತಿಚೌರ್ಯ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಇತರೆ ನಾಯಕರಿಗೆ ಸಂಕಷ್ಟ ಎದುರಾದಂತೆ ಆಗಿದೆ.
Vastu Tips for Wealth: ನೀವು ಸಹ ಈ ಮಾರ್ಗಗಳನ್ನು ಅನುಸರಿಸಿ ಆರ್ಥಿಕ ಸ್ಥಿರತೆ ಕಾಪಾಡಿಕೊಳ್ಳಿ!