ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಡಿ.ಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿದೆ.
ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಮಾನನಷ್ಟ ಮೊಕದ್ದಮ್ಮೆಯನ್ನು ಕನಕಪುರ ನ್ಯಾಯಾಲಯದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಿಕೊಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೋರ್ಟ್ ಮೊರೆ ಹೋಗಿದ್ದರು. ಅದರಲ್ಲಿ ಡಿಕೆ ಶಿವಕುಮಾರ್ ಬಲಾಢ್ಯರಾಗಿದ್ದಾರೆ. ನಾನು ಕನಕಪುರಕ್ಕೆ ಹೋಗಲು ತೊಂದರೆ ಮಾಡ್ತಾರೆ. ಹೀಗಾಗಿ ಬೆಂಗಳೂರಿನ ಕೋರ್ಟ್ ಗೆ ವರ್ಗಾವಣೆ ಮಾಡುವಂತೆ ಅರ್ಜಿಯಲ್ಲಿ ಹೈಕೋರ್ಟ್ ನ್ಯಾಯಾಪೀಠವನ್ನು ಮನವಿ ಮಾಡಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಡಿ.ಕೆ ಶಿವಕುಮಾರ್ ಸಲ್ಲಿಸಿದ್ದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಪ್ರಕರಣ ಕುರಿತಂತೆ ಡಿಕೆ ಶಿವಕುಮಾರ್ ಗೆ ತುರ್ತು ನೋಟಿಸ್ ಜಾರಿಗೊಳಿಸಿದೆ.
ಅಂದಹಾಗೇ ಬಿಜೆಳಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಯಿಂದ ನನ್ನ ಘನತೆ ಮತ್ತು ವರ್ಚಸ್ಸಿಗೆ ಹಾನಿಯಾಗಿದ್ದು, 204 ಕೋಟಿ ಪರಿಹಾರ ನೀಡುವಂತೆ ಆದೇಶಿಸಬೇಕು ಎಂದು ಕೋರಿ ಶಿವಕುಮಾರ್, ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸುವಂತೆ ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಮಾ.23ರ ನಂತ್ರ ಮಂಡ್ಯ, ಕೋಲಾರ, ಹಾಸನ ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ – HDK
BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಾಳೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು