ಬೆಂಗಳೂರು : ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೆಐಡಿಬಿ ಅಧಿಕಾರಿ ಶಿವಕುಮಾರ್ ಪತ್ನಿ ಹಾಗೂ ಹೈಕೋರ್ಟ್ ವಕೀಲೆ ಚೈತ್ರಾಗೌಡ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗುತ್ತಿದ್ದಂತೆ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಕರ್ನಾಟಕ ಹೈಕೋರ್ಟ್ ವಕೀಲೆ ಹಾಗೂ ಕೆಎಎಸ್ ಅಧಿಕಾರಿ ಶಿವಕುಮಾರ್ ಎಂಬುವರ ಪತ್ನಿ ಚೈತ್ರಾಗೌಡ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.