ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ಉಬರ್ ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆ ನಡೆಸುತ್ತಿವೆ. ಇಂತಹ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಆರು ವಾರಗಳಲ್ಲಿ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ.
ಇಂದು ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಸಂಬಂಧ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಶ್ಯಾಮ್ ಪ್ರಸಾದ್ ಅವರನ್ನು ಒಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು.
ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ನಿಯಮ ರೂಪಿಸಿಲ್ಲದ ಕಾರಣ ನಿಯಮಗಳಲ್ಲಿದೇ ಬೈಕ್ ಟ್ಯಾಕ್ಸ್ ಕಾರ್ಯಾಚರಣೆ ಮಾಡುವಂತಿಲ್ಲ ಎಂಬುದಾಗಿ ತಿಳಿಸಿತು.
ಮೂರು ತಿಂಗಳಲ್ಲಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು. ಅಲ್ಲದೇ ಆರು ವಾರಗಳಲ್ಲಿ ಉಬರ್, ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್ ನ್ಯಾಯಪೀಠವು ಆದೇಶಿಸಿದೆ. ಈ ಮೂಲಕ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯಲ್ಲಿ ತೊಡಗಿದ್ದಂತ ಉಬರ್, ರ್ಯಾಪಿಡೋ ಗಳಿಗೆ ಬಿಗ್ ಶಾಕ್ ಅನ್ನು ಹೈಕೋರ್ಟ್ ನೀಡಿದೆ.
ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
BREAKING: ಬಿಸಿಲಿನ ತಾಪಮಾನ ಹಿನ್ನಲೆ: ರಾಜ್ಯ ಸರ್ಕಾರದಿಂದ ‘ಸರ್ಕಾರಿ ಕಚೇರಿ’ ಕೆಲಸದ ಸಮಯ ಬದಲಿಸಿ ಆದೇಶ