ಬೆಂಗಳೂರು: ನಗರದ ಅನೇಕ ಕಡೆಯಲ್ಲಿ ಪುಟ್ ಪಾತ್ ಗಳನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಹೈಕೋರ್ಟ್ ಗೆ ಅರ್ಜಿ ಕೂಡ ಸಲ್ಲಿಕೆಯಾಗಿತ್ತು. ಹೀಗಾಗಿ ಇಂದು ಪುಟ್ ಪಾತ್ ಗಳನ್ನು ಒತ್ತುವರಿ ತೆರವು ಮಾಡದಂತ ಬಿಬಿಎಂಪಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.
ಇಂದು ಕರ್ನಾಟಕ ಹೈಕೋರ್ಟ್ ಬೆಂಗಳೂರಲ್ಲಿ ಪುಟ್ ಪಾತ್ ಒತ್ತುವರಿಗಳನ್ನು ತೆರವು ಮಾಡದಂತ ಬಿಬಿಎಂಪಿಯ ಕಾರ್ಯ ವೈಖರಿಗೆ ತೀವ್ರ ಅಸಮಾಧಾನವನ್ನು ಹೊರ ಹಾಕಿದೆ.
ಇದೇ ಸಂದರ್ಭದಲ್ಲಿ ಬಿಬಿಎಂಪಿಗೆ ಎಲ್ಲಾ ಪುಟ್ ಪಾತ್ ಗಳ ಒತ್ತುವರಿಯನ್ನು ತೆರವು ಮಾಡುವಂತೆ ಖಡಕ್ ಸೂಚನೆಯನ್ನು ಹೈಕೋರ್ಟ್ ನೀಡಿದೆ.
ಬಿಬಿಎಂಪಿಯಿಂದ ಬೆಂಗಳೂರಲ್ಲಿ ರಸ್ತೆ, ಪುಟ್ ಪಾತ್ ಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಒತ್ತುವರಿಯ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಹೀಗೆ ಆದ್ರೇ ಸ್ವಯಂ ಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಳ್ಳೋದಾಗಿ ಖಡಕ್ ಎಚ್ಚರಿಕೆ ನೀಡಿದೆ.
ಇನ್ನೂ ಬೆಂಗಳೂರಲ್ಲಿ ಪುಟ್ ಪಾತ್ ಒತ್ತುವರಿಗಳ ತೆರವು ವಿಚಾರವಾಗಿ ಫೆ.1ರಂದು ಬಿಬಿಎಂಪಿಯ ಮುಖ್ಯ ಆಯುಕ್ತರೇ ಕೋರ್ಟ್ ಗೆ ಖುದ್ದು ಹಾಜರಾಗಿ, ವಿವರಣೆ ನೀಡುವಂತೆ ಹೈಕೋರ್ಟ್ ಸೂಚಿಸಿದೆ.
ಇದು ಅಂಚೆ ಕಚೇರಿಯ ಅದ್ಭುತ ಯೋಜನೆ: ನೀವು ತುಂಬಾ ಬಡ್ಡಿಯನ್ನು ಪಡೆಯುತ್ತೀರಿ
BREAKING: ಸೈಫರ್ ಪ್ರಕರಣದಲ್ಲಿ ಪಾಕಿಸ್ತಾನ್ ಮಾಜಿ ಪ್ರಧಾನಿ ‘ಇಮ್ರಾನ್ ಖಾನ್’ಗೆ 10 ವರ್ಷ ಜೈಲು ಶಿಕ್ಷೆ