ಬೆಂಗಳೂರು: ನಗರತ್ ಪೇಟೆಯಲ್ಲಿ ಹನುಮಾನ್ ಚಾಲೀಸಾ ಹಾಕಿದಂತ ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ಖಂಡಿಸಿ, ಬಿಜೆಪಿಯಿಂದ ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇಂದು ಈ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಕುರಿತಂತೆ ಸಂಸದ ತೇಜಸ್ವಿ ಸೂರ್ಯ ಅವರು, ಹೈಕೋರ್ಟ್ ಗೆ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು ಇಡೀ ಊರಲ್ಲಿ ಪ್ರತಿಭಟನೆ ನಡೆಸಿದ್ರೇ ಜನ ಓಡಾಡಬೇಡವೇ ಎಂದು ಪ್ರಶ್ನಿಸಿದರು.
ಆಗ ನ್ಯಾಯಪೀಠಕ್ಕೆ ಸಂಸದ ತೇಜಸ್ವಿ ಸೂರ್ಯ ಪರ ವಕೀಲ ಪ್ರಸನ್ನ ಕುಮಾರ್ ಅವರು ಒಂದೆಡೆ ಸೇರಿ ಘಟನೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಯಾವುದೇ ಕಾನೂನು ಬಾಹಿರ ಕೃತ್ಯವನ್ನು ನಡೆಸಿಲ್ಲ ಎಂಬುದಾಗಿ ವಾದಿಸಿದರು.
ಸಿಎಂ ಸಿದ್ಧರಾಮಯ್ಯ ವಿರುದ್ಧದ ಇಂತದ್ದೇ ಕೇಸ್ ಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಹೀಗಾಗಿ ಆ ತೀರ್ಪು ಈ ಪ್ರಕರಣಕ್ಕೂ ಅನ್ವಯಿಸಲಿದೆ ಎಂಬುದಾಗಿ ಅಭಿಪ್ರಾಯ ಪಟ್ಟು, ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಸ್ಪೋಟದ ಆರೋಪಿಯ ಬಗ್ಗೆ ‘NIA’ಗೆ ಮಹತ್ವದ ಸುಳಿವು ಪತ್ತೆ
BREAKING : ದೆಹಲಿ ಸಿಎಂ ‘ಕೇಜ್ರಿವಾಲ್’ ಅಸ್ವಸ್ಥ : ‘Bp’ ಲೋ, ಕೋರ್ಟ್’ನಿಂದ ಹೊರ ಕರೆತಂದ ಅಧಿಕಾರಿಗಳು