ಬೆಂಗಳೂರು: ಚಿತ್ರದುರ್ಗದಲ್ಲಿ ಭೋವಿ ಮಠದಲ್ಲೇ ರಾಜಕೀಯ ಭಾ,ಣ ಮಾಡಿ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದಂತ ಸಂಸದ ಬಿವೈ ರಾಘವೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಎಫ್ಐಆರ್ ಗೆ ಹೈಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ಚಿತ್ರದುರ್ಗ ಭೋವಿ ಮಠದಲ್ಲಿ ರಾಜಕೀಯ ಭಾಷಣ ಮಾಡುವ ಮೂಲಕ, ಚುನಾವಣಾ ನೀತಿ ಸಂಹಿತೆಯನ್ನು ಸಂಸದ ಬಿವೈ ರಾಘವೇಂದ್ರ ಉಲ್ಲಂಘನೆ ಮಾಡಿದಂತ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಈ ಪ್ರಕರಣ ರದ್ದು ಕೋರಿ ಸಂಸದ ಬಿವೈ ರಾಘವೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಏಕಸದಸ್ಯ ನ್ಯಾಯಪೀಠವು, ಪ್ರಕರಣಕ್ಕೆ ತಡೆ ನೀಡಿ ಆದೇಶಿಸಿದ್ದಾರೆ.
ಅಂದಹಾಗೇ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಸಂದೀಪ್ ಎಸ್. ಪಾಟೀಲ್, ಅರ್ಜಿದಾರರು ಎಸಗಿದ್ದಾರೆ ಎನ್ನಲಾದ ಅಪರಾಧಗಳ ಕುರಿತು ಎಫ್‌ಐಆರ್‌ನಲ್ಲಿ ಮಾಹಿತಿ ಉಲ್ಲೇಖಿಸಲಿಲ್ಲ. ಹಾಗಾಗಿ, ಕ್ರಿಮಿನಲ್ ಪ್ರಕ್ರಿಯೆ ಮುಂದುವರಿಸಿದರೆ ಕಾನೂನಿಗೆ ವಿರುದ್ಧ ನಡೆದಂತಾಗುತ್ತದೆ. ಈ ಕಾರಣದಿಂದ ಎಫ್‌ಐಆರ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ರದ್ದುಗೊಳಿಸಬೇಕು. ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಬೇಕು ಎಂದು ಮನವಿ ಮಾಡಿದ್ದರು.
ನಕಲಿ ರಾಜಕೀಯ ಜಾಹೀರಾತಿನ ವಿರುದ್ಧ ನಟ ‘ಅಮೀರ್ ಖಾನ್’ ದೂರು, ‘FIR’ ದಾಖಲು
BREAKING: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ, ಸಂಸದ ಸ್ಥಾನಕ್ಕೆ ‘ಕರಡಿ ಸಂಗಣ್ಣ’ ರಾಜೀನಾಮೆ