ಬೆಂಗಳೂರು: ನಗರದ ನಗರತ್ ಪೇಟೆಯಲ್ಲಿನ ಯುವಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ಪ್ರಕರಣದಲ್ಲಿ ಸಂಸದ ತೇಜಸ್ವಿ ಸೂರ್ಯಗೆ ಹಾಗೂ ರಾಮೇಶ್ವರಂ ಕೆಫೆ ಸ್ಪೋಟದ ಶಂಕಿತ ಆರೋಪಿಯನ್ನು ತಮಿಳುನಾಡಿಗೆ ಲಿಂಕ್ ಮಾಡಿದಂತ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ ಮಾಲೀಕ ಮುಖೇಶ್ ಎಂಬುವರು ಹನುಮಾನ್ ಜಾಲೀಸ್ ಹಾಕಿದ್ದಕ್ಕೆ ಅವರ ಮೇಲೆ ನಡೆದಿದ್ದ ಹಲ್ಲೆಸಲಾಗಿತ್ತು. ಈ ಹಲ್ಲೆ ಖಂಡಿಸಿ ಕಳೆದ ಮಂಗಳವಾರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು.
ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ ಸೇರಿ 41 ಮಂದಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರಿಂದ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಕೋರ್ಟ್ ಇಂದು ಮಧ್ಯಂತರ ತಡೆಯನ್ನು ನೀಡಿ ಆದೇಶಿಸಿದೆ.
ಇನ್ನೂ ಸಂಸದೆ ಶೋಭಾ ಕರಂದ್ಲಾಜೆ ಅವರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಘಟನೆಗೆ ಸಂಬಂಧಿಸಿದಂತೆ ಬಾಂಬರ್ ತಮಿಳುನಾಡಿನ ವ್ಯಕ್ತಿಯ ಬಗ್ಗೆ ಲಿಂಕ್ ಮಾಡಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬಗ್ಗೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣವನ್ನು ರದ್ದುಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ವಿಚಾರಮೆ ನಡೆಸಿದಂತ ಹೈಕೋರ್ಟ್ ತಡೆಯನ್ನು ನೀಡಿದೆ.
BREAKING : ದೆಹಲಿ ಸಿಎಂ ‘ಕೇಜ್ರಿವಾಲ್’ ಅಸ್ವಸ್ಥ : ‘Bp’ ಲೋ, ಕೋರ್ಟ್’ನಿಂದ ಹೊರ ಕರೆತಂದ ಅಧಿಕಾರಿಗಳು
BREAKING : ‘ಕಾಂಗ್ರೆಸ್’ಗೆ ‘ಕೋರ್ಟ್’ ಶಾಕ್ : ‘ಆದಾಯ ತೆರಿಗೆ ಮರು ಮೌಲ್ಯಮಾಪನ’ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ