ಚಾಮರಾಜಪೇಟೆಯ ಪಶು ಆಸ್ಪತ್ರೆ ಭೂಮಿಯನ್ನು ‘ವಕ್ಫ್ ಬೋರ್ಡ್‌’ ಗೆ ಕೊಟ್ಟ ಸರ್ಕಾರಿ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಕೋಟ್ಯಾಂತರ ರೂ. ಮೌಲ್ಯದ ಚಾಮರಾಜಪೇಟೆಯ ಪಶು ಆಸ್ಪತ್ರೆಯ ಭೂಮಿಯನ್ನು ವಕ್ಫ್‌ ಬೋರ್ಡ್‌ಗೆ ನೀಡಲಾಗಿದ್ದ ಸರ್ಕಾರಿ ಆದೇಶಕ್ಕೆ ಇದೀಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ. ಕಳೆದ ಫೆ.28 ರಂದು ರಾಜ್ಯ ಸರ್ಕಾರ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪಶು ಸಂಗೋಪನೆ ಇಲಾಖೆಗೆ ಒಳಪಟ್ಟ ಪಶುಚಿಕಿತ್ಸಾಲಯಕ್ಕೆ ಸೇರಿದ 2 ಎಕರೆ ಜಾಗವನ್ನು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಗೆ ನೀಡಿ ಆದೇಶ ಹೊರಡಿಸಿತ್ತು. ಇದೀಗ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಚಾಮರಾಜಪೇಟೆ ನಿವಾಸಿಗಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನು ವಿಚಾರಣೆ … Continue reading ಚಾಮರಾಜಪೇಟೆಯ ಪಶು ಆಸ್ಪತ್ರೆ ಭೂಮಿಯನ್ನು ‘ವಕ್ಫ್ ಬೋರ್ಡ್‌’ ಗೆ ಕೊಟ್ಟ ಸರ್ಕಾರಿ ಆದೇಶಕ್ಕೆ ಹೈಕೋರ್ಟ್ ತಡೆ