ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದಂತ ಅನುಮತಿ ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ಅವರು ಸಲ್ಲಿಸಿರುವಂತ ರಿಟ್ ಅರ್ಜಿಯ ವಿಚಾರಣೆ, ಇಂದು 2.30ಕ್ಕೆ ನಡೆಯಲಿದೆ.
ಸಿಎಂ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಪರವಾಗಿ ರಿಟ್ ಸಲ್ಲಿಸಿದ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಸಲ್ಲಿಸಿದರು. ಈ ಅರ್ಜಿಯನ್ನು ಇಂದು ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂಬುದಾಗಿ ತಿಳಿದು ಬಂದಿದೆ. ಸಿಎಂ ಸಿದ್ಧರಾಮಯ್ಯ ಪರವಾಗಿ ಮಾಜಿ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ವಾದಿಸಲಿದ್ದಾರೆ ಎನ್ನಲಾಗುತ್ತಿದೆ.
ಇದೇ ಸಂದರ್ಭದಲ್ಲಿ ರಾಜ್ಯಾಧ್ಯಂತ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧದ ಮುಡಾ ಹಗರಣದ ಬಗ್ಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಹಲವೆಡೆ ಹಿಂಸಾಚಾರಕ್ಕೆ ತಿರುಗಿದ್ದರೇ, ಮತ್ತೆ ಕೆಲವೆಡೆ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಲಾಗಿದೆ.
BREAKING: ದೇಶದಲ್ಲಿ ಮತ್ತೊಂದು ಕೀಚಕ ಕೃತ್ಯ: ಬಸ್ ನಿಲ್ದಾಣದಲ್ಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ
BREAKING : ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಅಭಿಮಾನಿಗೆ ತಗುಲಿದ ಬೆಂಕಿ : ಆಸ್ಪತ್ರೆಗೆ ದಾಖಲು