Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಖಾಸಗಿ ಬಸ್ : 17 ಪ್ರಯಾಣಿಕರು ಬಚಾವ್, ತಪ್ಪಿದ ಭಾರಿ ಅನಾಹುತ!

BREAKING : ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ : ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟನೆ

ವಿಜಯಪುರದಲ್ಲಿ 3.71 ಲಕ್ಷ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡರ ಚರ್ಚೆ
KARNATAKA

ರಾಜ್ಯಸಭೆಯಲ್ಲಿ ರೇಲ್ವೆ ತಿದ್ದುಪಡಿ ಮಸೂದೆ ಮೇಲೆ ಹೆಚ್.ಡಿ.ದೇವೇಗೌಡರ ಚರ್ಚೆ

By ವಸಂತ ಬಿ ಈಶ್ವರಗೆರೆ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ ಎಂದು ಶ್ಲಾಘಿಸಿದರು.

ರಾಜ್ಯಸಭೆಯಲ್ಲಿ ಸೋಮವಾರ ಈ ಬಗ್ಗೆಮಾತನಾಡಿದ ಮಾಜಿ ಪ್ರಧಾನಿಗಳು; ಕರ್ನಾಟಕದಲ್ಲಿ ಮೈಸೂರು ಮಹಾರಾಜರ ಆ‍ಳ್ವಿಕೆ ವೇಳೆ ಮೈಸೂರು – ಹರಿಹರವರೆಗೂ ಮೀಟರ್‌ ಗೇಜ್‌ ರೇಲು ಮಾರ್ಗ ನಿರ್ಮಿಸಿದ್ದನ್ನು ಸ್ಮರಿಸಿದರಲ್ಲದೆ, ಆಗಿನ ತಮ್ಮ ರೇಲು ಪ್ರಯಾಣದ ಅನುಭವವನ್ನು ನೆನೆದರು.

ಅದೇ ರೇಲು ಮಾರ್ಗ ಮುಂಬಯಿ- ಚೆನ್ನೈ ರೇಲು ಮಾರ್ಗವಾಗಿದ್ದು, ಅದಕ್ಕೆ ಹರಿಹರ-ದಾವಣಗೆರೆ-ಶೃಂಗೇರಿ-ಬೇಲೂರು ಮೂಲಕ ಚನ್ನೈಗೆ ಸಂಪರ್ಕ ಕಲ್ಪಿಸಬೇಕು. ಇದು ಬಹಳ ಉಪಯುಕ್ತವಾಗಿದ್ದು, ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಈ ಯೋಜನೆಯನ್ನು ಆದಷ್ಟು ಬೇಗ ಕಾರ್ಯಗತ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ನಿರೀಕ್ಷೆಗೂ ಮೀರಿ ರೈಲ್ವೆ ಜಾಲ ಮತ್ತು ಮಾರ್ಗಗಳು ಸಾಕಷ್ಟು ಪ್ರಗತಿ ಸಾಧಿಸಿದೆ. ಈ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರನ್ನು ಅಭಿನಂದಿಸುವುದಾಗಿ ಹೇಳಿದರು.

ನಾನು ರೇಲ್ವೆ ಸಚಿವರನ್ನು ಅಭಿನಂದಿಸಿದರೆ ಕೆಲವರು ತಪ್ಪು ತಿಳಿದುಕೊಳ್ಳಬಾರದು. ನಾನು ಪ್ರಧಾನಿ ಆಗಿದ್ದಾಗ ಈ ಕ್ಷೇತ್ರದಲ್ಲಿ ಏನು ಮಾಡಿದ್ದೇನೆ, ನರೇಂದ್ರ ಮೋದಿ ಅವರು ಹತ್ತು ವರ್ಷಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ರೇಲ್ವೆ ತಿದ್ದುಪಡಿ ಮಸೂದೆಯು ಅತ್ಯಂತ ಮಹತ್ವದ ಮಸೂದೆ. ಇದಕ್ಕೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ ಎಂದ ಮಾಜಿ ಪ್ರಧಾನಿಗಳು; ಸದನದಲ್ಲಿಯೇ ಉಪಸ್ಥಿತರಿದ್ದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರಲ್ಲದೆ, ನೀವು ಅತ್ಯಂತ ಪ್ರಾಮಾಣಿಕ ರೇಲ್ವೆ ಸಚಿವರು ಎಂದರು.

ಮರೆಗುದ್ದಿ ಏತ ನೀರಾವರಿ ಯೋಜನೆ ಹಂತ, ಹಂತವಾಗಿ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

BIG NEWS: ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಕರ್ತವ್ಯ ನಿರ್ವಹಣೆ ಕಡ್ಡಾಯ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಖಾಸಗಿ ಬಸ್ : 17 ಪ್ರಯಾಣಿಕರು ಬಚಾವ್, ತಪ್ಪಿದ ಭಾರಿ ಅನಾಹುತ!

1 Min Read

BREAKING : ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ : ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟನೆ

1 Min Read

ವಿಜಯಪುರದಲ್ಲಿ 3.71 ಲಕ್ಷ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು!

1 Min Read
Recent News

BREAKING : ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಖಾಸಗಿ ಬಸ್ : 17 ಪ್ರಯಾಣಿಕರು ಬಚಾವ್, ತಪ್ಪಿದ ಭಾರಿ ಅನಾಹುತ!

BREAKING : ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ : ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟನೆ

ವಿಜಯಪುರದಲ್ಲಿ 3.71 ಲಕ್ಷ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು!

BREAKING : ಧಾರವಾಡದಲ್ಲಿ ಜಲ ಸಂಪನ್ಮೂಲ ಇಲಾಖೆಯ ಇಂಜಿನಿಯರ್ ನಿವಾಸ, ಕಚೇರಿ ಸೇರಿ 5 ಕಡೆ ಲೋಕಾಯುಕ್ತ ದಾಳಿ!

State News
KARNATAKA

BREAKING : ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಖಾಸಗಿ ಬಸ್ : 17 ಪ್ರಯಾಣಿಕರು ಬಚಾವ್, ತಪ್ಪಿದ ಭಾರಿ ಅನಾಹುತ!

By ಸುರೇಶ್‌ KARNATAKA 1 Min Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸ್ ಧಗಧಗನೇ ಹೊತ್ತಿ ಉರಿದ ಘಟನೆ…

BREAKING : ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ : ರಣದೀಪ್ ಸಿಂಗ್ ಸುರ್ಜೆವಾಲಾ ಸ್ಪಷ್ಟನೆ

ವಿಜಯಪುರದಲ್ಲಿ 3.71 ಲಕ್ಷ ಬಿಲ್ ಪಾವತಿಗೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು!

BREAKING : ಧಾರವಾಡದಲ್ಲಿ ಜಲ ಸಂಪನ್ಮೂಲ ಇಲಾಖೆಯ ಇಂಜಿನಿಯರ್ ನಿವಾಸ, ಕಚೇರಿ ಸೇರಿ 5 ಕಡೆ ಲೋಕಾಯುಕ್ತ ದಾಳಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.