ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇಂದು ಸುದ್ದಿಗೋಷ್ಠಿಯಲ್ಲೇ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಂದ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಧ್ವನಿ ಎತ್ತೋ ಸಲುವಾಗಿ ಪಾದಯಾತ್ರೆ ನಡೆಸುವ ಸಂಬಂಧ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಹಾಜರಾಗಿದ್ದರು.
ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಂತ ವೇಳೆಯಲ್ಲೇ ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಕರ್ಚಿಪ್ ನಲ್ಲಿ ಒರೆಸಿಕೊಳ್ಳುತ್ತಲೇ ಮಾತನಾಡಿ, ಅಲ್ಲಿಂದ ತುರ್ತಾಗೆ ಅರ್ಧಕ್ಕೆ ಸುದ್ದಿಗೋಷ್ಠಿ ಮೊಟಕುಗೊಳಿಸಿ ಹೊರಟಿದ್ದರು.
ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ಹೆಚ್.ಡಿ ಕುಮಾರಸ್ವಾಮಿ ದಾಖಲಾಗಿದ್ದರು. ಅವರನ್ನು ಪರೀಕ್ಷಿಸಿದಂತ ವೈದ್ಯರು ಚಿಕಿತ್ಸೆ ನೀಡಿದ್ದರು. ಇದೀಗ ಹೆಚ್.ಡಿ ಕುಮಾರಸ್ವಾಮಿ ಚಿಕಿತ್ಸೆ ಪಡೆದ ಬಳಿಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಬಳಿಕ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗೆ ಆಗುತ್ತದೆ. ನನ್ನ ಆರೋಗ್ಯ ಹದಗೆಟ್ಟಿಲ್ಲ. ಈಗ ಚಿಕಿತ್ಸೆಯ ಬಳಿಕ ಗುಣಮುಖರಾಗಿದ್ದೇನೆ. ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದರು.
ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸಲು ರಾಜ್ಯ ಸರ್ಕಾರದ ಸಹಕಾರ ಮುಖ್ಯ: ಬಸವರಾಜ ಬೊಮ್ಮಾಯಿ
ಪ್ರಯಾಣಿಕರ ಗಮನಕ್ಕೆ: ಜು.29ರ ನಾಳೆಯಿಂದ ಜು.4ರವರೆಗೆ ಈ ರೈಲುಗಳ ಸಂಚಾರ ರದ್ದು | Train Cancelled