ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಂತಹ ಅಕ್ರಮ ಸೈಟ್ ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಹೆಚ್‍ಡಿ ಕುಮಾರಸ್ವಾಮಿ ನೀಡಿದ್ದಾರೆ.
ಟ್ವಿಟ್ ನಲ್ಲಿ ಎಚ್ ಡಿ ಕುಮಾರಸ್ವಾಮಿಯ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು, 40 ವರ್ಷಗಳ ಹಿಂದೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾ ಸೈಟ್ ಸಿಕ್ಕಿದೆ. ಅದರ ಸ್ವಾಧೀನ ಪತ್ರವನ್ನು ಪಡೆದುಕೊಂಡು ಈಗ ಸೈಟ್ ಕೊಟ್ಟಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ.ದೇವೇಗೌಡರ ಕುಟುಂಬದವರು ಪಡೆದಿರುವ ನಿವೇಶನಗಳ ಲೆಕ್ಕ ಕೊಡಲೇ? ಎಂದು ಪ್ರಶ್ನಿಸಿದ್ದಾರೆ.
40 ವರ್ಷಗಳ ಹಿಂದೆಯೇ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮುಡಾ ಸೈಟ್ ಸಿಕ್ಕಿದೆ. ಅದರ ಸ್ವಾಧೀನ ಪತ್ರವನ್ನು ಪಡೆದುಕೊಂಡು ಈಗ ಸೈಟ್ ಕೊಟ್ಟಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ.
ದೇವೇಗೌಡರ ಕುಟುಂಬದವರು ಪಡೆದಿರುವ ನಿವೇಶನಗಳ ಲೆಕ್ಕ ಕೊಡಲೇ? #ಕನ್ನಡಸುದ್ದಿ #ಮುಡಾನಿವೇಶನ pic.twitter.com/5KcVSYIiuz— Siddaramaiah (@siddaramaiah) July 30, 2024
ಇನ್ನೂ ಮೇಕೆದಾಟು ಯೋಜನೆಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಬಹುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಹೌದು ಈ ಕುರಿತು ಸಿಎಂ ಸಿದ್ದರಾಮಯ್ಯ ಮೇಕೆದಾಟು ಯೋಜನೆ ಜಾರಿಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಬಹುದು. ಜೊತೆಗೆ ವಿದ್ಯುತ್ ಅನ್ನು ಸಹ ಉತ್ಪಾದಿಸಬಹುದು. ಮಳೆಗಾಲದಲ್ಲಿ ಸಮುದ್ರ ಸೇರುವ ನೀರನ್ನು ಸಂಗ್ರಹಿಸಿಟ್ಟು ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದಾಗ ತಮಿಳುನಾಡಿಗೂ ನೀರು ಬಿಡಬಹುದು.
ಮಂಡ್ಯದ ಸಂಸದರು ಕೇಂದ್ರದಲ್ಲಿ ಸಚಿವರಾಗಿದ್ದಾರೆ, ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಿದರೆ ಅಣೆಕಟ್ಟು ನಿರ್ಮಾಣ ಕಾರ್ಯ ಆರಂಭಿಸಲು ನಮ್ಮ ಸರ್ಕಾರ ಸಿದ್ಧವಿದೆ. ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಜಾರಿಯಿಂದ ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಬಹುದು ಜೊತೆಗೆ ವಿದ್ಯುತ್ ಅನ್ನು ಸಹ ಉತ್ಪಾದಿಸಬಹುದು. ಮಳೆಗಾಲದಲ್ಲಿ ಸಮುದ್ರ ಸೇರುವ ನೀರನ್ನು ಸಂಗ್ರಹಿಸಿಟ್ಟು ಜಲಾಶಯಗಳಲ್ಲಿ ನೀರಿನ ಕೊರತೆಯಿದ್ದಾಗ ತಮಿಳುನಾಡಿಗೂ ನೀರು ಬಿಡಬಹುದು.
ಮಂಡ್ಯದ ಸಂಸದರು ಕೇಂದ್ರದಲ್ಲಿ ಸಚಿವರಾಗಿದ್ದಾರೆ, ಅವರು ಮೇಕೆದಾಟು ಯೋಜನೆಗೆ… pic.twitter.com/fVZyBskxCK
— Siddaramaiah (@siddaramaiah) July 30, 2024