ಮಂಡ್ಯ : ತಮ್ಮ ಮಗನ ಏಳಿಗೆಗಾಗಿ, ಅಣ್ಣನ ಮಗ ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ ಎಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಾಂಗ್ರೆಸ್ ಶಾಸಕ ಕದಲೂರು ಉದಯ್ ಆರೋಪ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಅವರು, ಅಣ್ಣನ ಮಗನನ್ನೇ ಸಹಿಸಿಕೊಳ್ಳಲಿಲ್ಲ ಇನ್ನು ನಮ್ಮನ್ನು ಸಹಿಸಿಕೊಳ್ಳುತ್ತಾರ? ಇವರ ಮಗ ಗೆದ್ದಿಲ್ಲ ಅಂತ ಅಣ್ಣನ ಮಗನ ಜೈಲಿಗೆ ಕಳುಹಿಸಿದರು. ಕ್ರಿಯೇಟ್ ಮಾಡಿ ಪ್ರಜ್ವಲ್ ರೇವಣ್ಣನನ್ನು ಜೈಲಿಗೆ ಕಳುಹಿಸಿದರು.
ಪ್ರಜ್ವಲ್ ಜೈಲಿಗೆ ಹೋಗಲು ನೂರಕ್ಕೆ ನೂರರಷ್ಟು ಹೆಚ್ ಡಿ ಕುಮಾರಸ್ವಾಮಿ ಕಾರಣ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮನಸು ಮಾಡಿದರೆ ಬಿಡಿಸಬಹುದಾಗಿತ್ತು. ಆದರೆ ಷಡ್ಯಂತರ ಮಾಡಿ ಪ್ರಜ್ವಲ್ ನನ್ನು ಜೈಲಿಗೆ ಹಾಕಿಸಿದ್ದಾರೆ. ಮಗನ ಏಳಿಗೆಗೆ ಹೆಚ್ ಡಿ ಕುಮಾರಸ್ವಾಮಿ ಅಣ್ಣನ ಮಗನನ್ನು ಜೈಲಿಗೆ ಕಳುಹಿಸಿದ್ದಾರೆ. ಎಂದು ಮದ್ದೂರಿನಲ್ಲಿ ಕಾಂಗ್ರೆಸ್ ಶಾಸಕ ಕದಲೂರು ಉದಯ ಹೇಳಿಕೆ ನೀಡಿದರು.








