ಬೆಂಗಳೂರು : ಇಂದು ಬಿಜೆಪಿ ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲೆ ಕೇಂದ್ರ ಸಚಿವರಾದಂತಹ ಹೆಚ್‍ಡಿ ಕುಮಾರಸ್ವಾಮಿ ಅವರಿಗೆ ಮೂಗಿನಿಂದ ರಕ್ತಸ್ರಾವ ಆಯಿತು. ತಕ್ಷಣ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಎಚ್ ಡಿ ಕುಮಾರಸ್ವಾಮಿ ಅವರು ಚೆನ್ನಾಗಿದ್ದಾರೆ ಎಂದು ತಿಳಿಸಿದರು.
ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ಬಿ ವೈ ವಿಜಯೇಂದ್ರ ಹೆಚ್‍ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಚ್ ಡಿ ಕುಮಾರಸ್ವಾಮಿ ಆರಾಮವಾಗಿದ್ದಾರೆ. ಎಚ್ ಡಿ ಕುಮಾರಸ್ವಾಮಿಗೆ ಸ್ವಲ್ಪ ಆಯಾಸವಾಗಿದೆ. ಅವರಿಗೆ ಕೆಲಸದ ಒತ್ತಡ ಇತ್ತು ಎಂದರು.
ಸದ್ಯ ವೈದ್ಯರು ಸ್ಕ್ಯಾನಿಂಗ್ ಗೆ ಕರೆದುಕೊಂಡು ಹೋಗಿದ್ದಾರೆ. ಯಾರು ಗಾಬರಿ ಪಡುವ ಅಗತ್ಯ ಇಲ್ಲ. ಕುಮಾರಸ್ವಾಮಿಯವರನ್ನು ಇದೀಗ ಮಾತಾಡಿಸಿಕೊಂಡು ಬಂದಿದ್ದೇನೆ. ಕುಮಾರಸ್ವಾಮಿಯವರು ಕಾಫಿ ಕುಡಿಯುತ್ತಾ ಕುಳಿತಿದ್ದರು.ಸದ್ಯ ಕುಮಾರಸ್ವಾಮಿ ಚೆನ್ನಾಗಿದ್ದಾರೆ ಎಂದು ಕುಮಾರಸ್ವಾಮಿ ಭೇಟಿ ಬಳಿಕ ವಿಜಯೇಂದ್ರ ಪ್ರತಿಕ್ರಿಯೆ ನೀಡಿದರು.
ಆತಂಕ ಪಡುವ ಅಗತ್ಯವಿಲ್ಲ : ನಿಖಿಲ್
ಎಚ್ ಡಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಯಾವುದೇ ರೀತಿಯಾಗಿ ಆತಂಕ ಪಡುವ ಅಗತ್ಯವಿಲ್ಲ ಅವರಿಗೆ ತಂದೆ ತಾಯಿಯ ಆಶೀರ್ವಾದವಿದೆ ಎಂದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸದ ಒತ್ತಡದಿಂದ ವಿಶ್ರಾಂತಿ ಪಡೆದುಕೊಳ್ಳಲು ಅವರಿಗೆ ಆಗಲಿಲ್ಲ. ಆ ರೀತಿ ಆದಂಗ ಪಡುವ ಯಾವುದೇ ವಾತಾವರಣ ಇಲ್ಲ. ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ. ಕುಮಾರಣ್ಣನ ಮೇಲೆ ತಂದೆ ತಾಯಿ ಆಶೀರ್ವಾದ ಇದೆ. ಕುಮಾರಣ್ಣಗೆ ಏನು ಆಗಿಲ್ಲ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.