ನವದೆಹಲಿ: ಇಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ HD ಕುಮಾರಸ್ವಾಮಿ ಅವರು ಭೇಟಿಯಾದರು. ಈ ಸಂದರ್ಭದಲ್ಲಿ ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೇಂದ್ರ ಸರಕಾರದ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ರೈಲ್ವೆ ಭವನದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು. ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ಮಾನ್ಯ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಲಾಯಿತು ಎಂದಿದ್ದಾರೆ.
ರೈಲ್ವೆ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತು. ಅಲ್ಲದೆ; ಮಾನ್ಯ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ಮಾನ್ಯ ರೈಲ್ವೆ ಸಚಿವರಿಗೆ ಮನವಿ ಮಾಡಲಾಯಿತು ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ಮಾಹಿತಿ ಹಂಚಿಕೊಳ್ಳಲಾಯಿತು ಎಂದು ತಿಳಿಸಿದ್ದಾರೆ.
I had a cordial meeting with Shri @AshwiniVaishnaw avaru, the Railway Minister of the Central Government, at Railway Bhawan.
We discussed the timely completion of delayed and ongoing railway projects in the state, the approval of new railway lines, and securing financial… pic.twitter.com/IhtwmdsZa2
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 19, 2024
ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರವೇ ‘ನೀರಿನ ದರ ಏರಿಕೆ’ ಸುಳಿವು ನೀಡಿದ ಡಿಸಿಎಂ ಡಿಕೆಶಿ